ಚಿಕ್ಕಮಗಳೂರು: ಕರ್ನಾಟಕ ರಾಜ್ಯ ರಸ್ತೆ ಬೀದಿಬದಿ ವ್ಯಾಪಾರಿಗಳ ಸಂಘದ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಸುಮೇರ್ ಖಾನ್ ಆಯ್ಕೆಯಾಗಿದ್ದಾರೆ.
ಸಂಘದ ಚುನಾವಣೆಯಲ್ಲಿ ಐದು ಮಂದಿ ಸ್ಪರ್ಧಿಸಿದ್ದು ಅದರಲ್ಲಿ ಸುಮೇರ್ ಖಾನ್ ಅವರು 88 ಮತಗಳನ್ನು ಪಡೆಯುವ ಮೂಲಕ ಅಧ್ಯಕ್ಷರ ಆಯ್ಕೆಯ ಚುನಾವಣೆಯಲ್ಲಿ ಜಯಶೀಲರಾಗಿದ್ದು ಅವರಿಗೆ ಇದೇ ವೇಳೆ ಸುತ್ತಮುತ್ತಲಿನ ವ್ಯಾಪಾರಿಗಳು ಸನ್ಮಾನಿಸಿದರು.
ನಂತರ ಮಾತನಾಡಿದ ಅವರು ಬೀದಿ ಬದಿ ವ್ಯಾಪಾರಿಗಳು ನಗರದಲ್ಲಿ ಸುಮಾರು 400ಕ್ಕೂ ಹೆಚ್ಚು ಮಂದಿ ವ್ಯವಹಾರ ಮಾಡುತ್ತಿದ್ದಾರೆ. ನಗರಸಭೆ ವತಿಯಿಂದ ಸ್ಮಾಟ್‍ಕಾರ್ಡ್‍ನ್ನು ನೀಡಿದ್ದಾರೆ. ಪ್ರಧಾನ ಮಂತ್ರಿ ಯೋಜನೆಯಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ಸೌಲಭ್ಯ ಒದಗಿಸಿದೆ ಎಂದರು.
ಕೆಲವು ಬೀದಿ ಬದಿ ವ್ಯಾಪಾರಿಗಳು ಸರ್ಕಾರದ ಸೌಲಭ್ಯಗಳು ತಿಳಿದುಕೊಂಡಿಲ್ಲ ಆ ಬಗ್ಗೆ ಮುಂದಿನ ದಿನಗಳಲ್ಲಿ ಅವರಿಗೆ ಮನವರಿಕೆ ಮಾಡಿ ಸರ್ಕಾರದ ಸೌಲಭ್ಯ ಮುಟ್ಟಿಸುವ ಕೆಲಸ ಮಾಡುವುದಾಗಿ ಹೇಳಿದರು.
ತುರ್ತು ಸಂದರ್ಭದಲ್ಲಿ ಆರೋಗ್ಯ ಚಿಕಿತ್ಸೆಗಾಗಿ ವ್ಯಾಪಾರಿಗಳಿಗೆ ಆಸ್ಪತ್ರೆಯಲ್ಲಿ ಒಟ್ಟು ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿ ದೊರೆಯಲಿದ್ದು ಅದರ ಸದುಪಯೋಗ ವ್ಯಾಪಾರಿಗಳು ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ವ್ಯಾಪಾರಿಗಳಾದ ಸಾದಿಕ್, ಆದಿಲ್, ನವೀನ್, ಇರ್ಷಾದ್, ವಾರೀಸ್, ಇಲಿಯಾಜ್, ಸೈಯದ್ ಗೌಸ್‍ಪೀರ್, ಪಾರೂಕ್ ಮತ್ತಿತರರು ಹಾಜರಿದ್ದರು.
Post a Comment