ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಶಿಕ್ಷಣ ಸಚಿವರಿಗೆ ಕೊರೋನಾ ಪಾಸಿಟಿವ್ ದೃಢ

ಶಿಕ್ಷಣ ಸಚಿವರಿಗೆ ಕೊರೋನಾ ಪಾಸಿಟಿವ್ ದೃಢ

ಬೆಂಗಳೂರು: ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಕುರಿತು ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ಅವರು " ನಾನು ಇಂದು ಸೌಮ್ಯ ರೋಗ ಲಕ್ಷಣಗಳೊಂದಿಗೆ ಕೋವಿಡ್ 19 ಪರೀಕ್ಷೆ ಮಾಡಿಸಿದ್ದು ಪಾಸಿಟಿವ್ ವರದಿ ಬಂದಿದೆ" ಎಂದು ಹೇಳಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ಅವರು " ನಾನು ಕ್ವಾರಂಟೈನ್ ನಲ್ಲಿದ್ದೇನೆ. ಮತ್ತು ಅವಶ್ಯಕವಾಗಿರುವ ಎಲ್ಲಾ ಮುಂಜಾಗೃತಾ ಕ್ರಮಗಳನ್ನು ಪಾಲಿಸುತ್ತಿದ್ದೇನೆ ಮತ್ತು  ಔಷಧಿಯನ್ನು ಸೇವಿಸುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಆದಷ್ಟು ಬೇಗ ಪರೀಕ್ಷಿಸುವಂತೆ ವಿನಂತಿಸುತ್ತೇನೆ" ಎಂದು ಹೇಳಿದ್ದಾರೆ.

ವೈದ್ಯರ ಸಲಹೆ ಮೇರೆಗೆ ಅವರು ಕ್ವಾರಂಟೈನ್ ಆಗಿದ್ದು ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಲ್ಲರೂ ಸುರಕ್ಷಿತವಾಗಿರುವಂತೆ ಮತ್ತು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವಂತೆ ಅವರು ರಾಜ್ಯದ ಜನತೆಯಲ್ಲಿ ವಿನಂತಿಸಿದ್ದಾರೆ.

0 تعليقات

إرسال تعليق

Post a Comment (0)

أحدث أقدم