ಬಂಟ್ವಾಳ: ಆಟೋ ಗ್ಯಾಸ್ ಸಿಲಿಂಡರ್ ಅನ್ನು ಕತ್ತರಿಸುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟಗೊಂಡು ವ್ಯಕ್ತಿಯೊಬ್ಬರು ಗಾಯಗೊಂಡಿರುವ ಘಟನೆ ಫರಂಗಿಪೇಟೆ ಸಮೀಪದ ಅಮ್ಮೆಮಾರ್ ಎಂಬಲ್ಲಿ ಶನಿವಾರ ಸಂಜೆ ನಡೆದಿದೆ.
ಗುಜರಿ ವ್ಯಾಪಾರಿಯಾದ ಅಮ್ಮೆಮಾರ್ ನಿವಾಸಿಯೊಬ್ಬರ ಮನೆಯಲ್ಲಿ ಗುಜರಿಗೆ ಬಂದಿದ್ದ ಆಟೋ ಗ್ಯಾಸ್ ಸಿಲಿಂಡರ್ ಕತ್ತರಿಸಲು ವ್ಯಕ್ತಿಯೊಬ್ಬರು ಅವರ ಆಟೋ ರಿಕ್ಷಾದಲ್ಲಿ ಬಂದಿದ್ದು ಸಿಲಿಂಡರ್ ಕತ್ತರಿಸುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟಗೊಂಡಿದೆ ಎನ್ನಲಾಗಿದೆ.
ಘಟನೆಯಿಂದ ಸಿಲಿಂಡರ್ ಕತ್ತರಿಸುತ್ತಿದ್ದ ವ್ಯಕ್ತಿ ಗಾಯಗೊಂಡಿದ್ದು, ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅವರು ಬಂದಿದ್ದ ಆಟೋ ರಿಕ್ಷಾ ಭಸ್ಮವಾಗಿದ್ದು ಸಮೀಪದ ಮನೆಗಳ ಗೋಡೆಗಳು ಬಿರುಕು ಬಿಟ್ಟಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.
Post a Comment