ಮಂಗಳೂರು: ಜನವರಿ 30 ರಂದು ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತು, ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣ ಕನ್ನಡ ಇವರು ಸಂಯುಕ್ತವಾಗಿ ಮಂಗಳೂರಿನ ತುಳುಭವನದಲ್ಲಿ ನಿಗದಿ ಪಡಿಸಿದ್ದ 8ನೇ ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಸಮ್ಮೇಳನ ಹಾಗೂ ಕಲಾ ವೈವಿಧ್ಯವನ್ನು ಮುಂದೂಡಲಾಗಿದೆ.
ರಾಜ್ಯ ಸರಕಾರ ಜಾರಿ ಮಾಡಿರುವ ವಾರಾಂತ್ಯ ಲಾಕ್ಡೌನ್ ಮತ್ತು ಕೋವಿಡ್ ನಿರ್ಬಂಧಗಳ ಕಾರಣಗಳಿಗಾಗಿ ಮುಂದೂಡಲಾಗಿದೆ ಮತ್ತು ಕೋವಿಡ್ ನಿರ್ಬಂಧಗಳು ಮುಗಿದ ಬಳಿಕ ಸಮ್ಮೇಳನವನ್ನು ನಗರದಲ್ಲಿ ಅದ್ಧೂರಿಯಾಗಿ ನಡೆಸಲಾಗುವುದು ಎಂದು ಆಯೋಜಕರು ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق