ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ರಸ್ತೆ ಅಪಘಾತ; ಏಳು ಮಂದಿ ಸಾವು

ರಸ್ತೆ ಅಪಘಾತ; ಏಳು ಮಂದಿ ಸಾವು

 


ದಾವಣಗೆರೆ: ಜಗಳೂರು ತಾಲೂಕಿನ ಕಾನನಕಟ್ಟೆ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಇಂದು ಬೆಳಗ್ಗಿನ ಜಾವ ಸಂಭವಿಸಿದ ಕಾರು ಅಪಘಾತದಲ್ಲಿ ಏಳು ಮಂದಿ ಯುವಕರು ಮೃತಪಟ್ಟ ಘಟನೆಯೊಂದು ನಡೆಯಿತು.

ಮೃತರನ್ನು ಮಲ್ಲನಗೌಡ (22), ಸಂತೋಷ್‍ (21), ಸಂಜೀವ್ (20), ಜಬೀಮ್ (18), ರಘು(23), ಸಿದ್ದೇಶ್ (20) ಹಾಗೂ ವೇದಮೂರ್ತಿ (18) ಎಂದು ಗುರುತಿಸಲಾಗಿದೆ.

ಮೃತರಲ್ಲಿ ನಾಲ್ವರು ಯಾದಗಿರಿ ಜಿಲ್ಲೆಯ ಸುರಪುರದವರು, ಇಬ್ಬರು ವಿಜಯನಗರ ಹಾಗೂ ಓರ್ವ ವಿಜಯಪುರದವರು ಎಂದು ಪೊಲೀಸರು ತಿಳಿಸಿದ್ದಾರೆ.

ಮೃತದೇಹಗಳನ್ನು ಜಗಳೂರು ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಮೃತರ ವಾರಸುದಾರರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದರು.

ಬೆಂಗಳೂರಿನಿಂದ ಹೊಸಪೇಟೆ ಕಡೆ ಹೋಗುತ್ತಿದ್ದ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಡಿಕ್ಕಿಯಾದ ರಭಸಕ್ಕೆ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ, ಓರ್ವ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಕೊನೆಯುಸಿರೆ ಳೆದಿದ್ದಾರೆ.


0 Comments

Post a Comment

Post a Comment (0)

Previous Post Next Post