ದಾವಣಗೆರೆ: ಎಲೆಬೇತೂರು ಗ್ರಾಮದಲ್ಲಿ ವೃದ್ದ ದಂಪತಿಗಳನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆಯೊಂದು ಮಂಗಳವಾರ ಬೆಳಕಿಗೆ ಬಂದಿದೆ.
ಗುರುಸಿದ್ದಯ್ಯ (80) ಸರೋಜಮ್ಮ (75) ಕೊಲೆಯಾದ ದಂಪತಿ. ಸೋಮವಾರ ತಡರಾತ್ರಿ ಕೊಲೆ ನಡೆದಿದೆ ಎನ್ನಲಾಗಿದೆ.
ಮಧ್ಯರಾತ್ರಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ದಂಪತಿಗಳಿಗೆ ಮೂವರು ಹೆಣ್ಣು ಮಕ್ಕಳು ಇದ್ದು, ಮೂವರಿಗೂ ಮದುವೆಯಾಗಿದೆ.
ಮನೆಯಲ್ಲಿ ಪತಿ ಪತ್ನಿ ಇಬ್ಬರೇ ವಾಸವಾಗಿದ್ದರು. ಸ್ಥಳಕ್ಕೆ ದಾವಣಗೆರೆ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಪಕ್ಕದ ಮನೆಯವರು ಬೆಳಗ್ಗೆ ಸರೋಜಮ್ಮ ಅವರನ್ನು ಭೇಟಿ ಮಾಡಲು ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಶ್ವಾನದಳ ಹಾಗೂ ಬೆರಳಚ್ಚು ತಜ್ಞ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Post a Comment