ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪಿಯುಸಿ ಯಿಂದಲೇ ಸಿಇಟಿ ಮತ್ತು ನೀಟ್ ಪರೀಕ್ಷೆಗೆ ತರಬೇತಿ ನೀಡಲು ನಿರ್ಧಾರ

ಪಿಯುಸಿ ಯಿಂದಲೇ ಸಿಇಟಿ ಮತ್ತು ನೀಟ್ ಪರೀಕ್ಷೆಗೆ ತರಬೇತಿ ನೀಡಲು ನಿರ್ಧಾರ

 


ಬೆಂಗಳೂರು: ಮುಂದಿನ ಶೈಕ್ಷಣಿಕ ಸಾಲಿನಿಂದ ಪ್ರಥಮ ಪಿಯುಸಿ ಹಂತದಿಂದಲೇ ಸಿಇಟಿ ಮತ್ತು ನೀಟ್ ಪರೀಕ್ಷೆಗೆ ತರಬೇತಿ ನೀಡಲು ಪದವಿಪೂರ್ವ ಶಿಕ್ಷಣ ಇಲಾಖೆ ತೀರ್ಮಾನಿಸಿದೆ.

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ವೈದ್ಯಕೀಯ, ಎಂಜಿನಿಯರಿಂಗ್ ಹಾಗೂ ವೃತ್ತಿಪರ ಕೋರ್ಸುಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವೇಶ ಪಡೆಯಲು ಅನುಕೂಲವಾಗುವಂತೆ ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಥಮ ಪಿಯುಸಿ ಹಂತದಿಂದಲೇ ಸರ್ಕಾರಿ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ನೀಟ್, ಸಿಇಟಿ ಪರೀಕ್ಷೆಗೆ ತರಬೇತಿ ನೀಡಲಾಗುತ್ತದೆ.

ಈ ಹಿಂದೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಇಟಿ ಪರೀಕ್ಷೆ ತರಬೇತಿ ನೀಡಲಾಗುತ್ತಿದ್ದು, ಬಳಿಕ ಯೋಜನೆ ಕೈಬಿಡಲಾಗಿತ್ತು. NCERT ಪಠ್ಯಕ್ರಮದ ಅನ್ವಯ ಮತ್ತು ಪ್ರಥಮ ಪಿಯುಸಿ ಹಂತದಿಂದಲೇ ಸರ್ಕಾರಿ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ಸಿಇಟಿ ಮತ್ತು ನೀಟ್ ಪರೀಕ್ಷೆಗೆ ತರಬೇತಿ ನೀಡಲಾಗುತ್ತದೆ. ಪ್ರತಿ ತಾಲೂಕಿನಲ್ಲಿ ಒಂದು ನೋಡಲ್ ಕಾಲೇಜು ಗುರುತಿಸಿ ತರಬೇತಿ ನೀಡಲಾಗುವುದು ಎನ್ನಲಾಗಿದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವಿಶ್ವಾಸ ಕಿರಣ ಯೋಜನೆಯಡಿ ಇಂಗ್ಲಿಷ್ ತರಬೇತಿ ನೀಡುತ್ತಿದ್ದು, ಇದನ್ನು ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ವಿಸ್ತರಿಸಲು ಪರವಿಪೂರ್ವ ಶಿಕ್ಷಣ ಇಲಾಖೆ ತೀರ್ಮಾನಿಸಿದೆ.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post