ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ನಂದಿನಿ ಹಾಲಿನ ದರ ಹೆಚ್ಚಳಕ್ಕೆ ಬೇಡಿಕೆ

ನಂದಿನಿ ಹಾಲಿನ ದರ ಹೆಚ್ಚಳಕ್ಕೆ ಬೇಡಿಕೆ

 


ಬೆಂಗಳೂರು: ನಂದಿನಿ ಹಾಲು ದರ ಲೀಟರ್ ಗೆ 3 ರೂ ಹೆಚ್ಚಳ ಮಾಡಬೇಕೆಂದು ಹಾಲು ಒಕ್ಕೂಟಗಳಿಂದ ಬೇಡಿಕೆ ಇಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಒಂದು ಲೀಟರ್ ನಂದಿನಿ ಹಾಲಿನ ದರ ದೇಶದಲ್ಲಿಯೇ ಕಡಿಮೆಯಿದ್ದು, ಇದನ್ನು 3 ರೂಪಾಯಿ ಹೆಚ್ಚಳ ಮಾಡಬೇಕೆಂದು ಹೇಳಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಹಾಲಿನ ದರ ಹೆಚ್ಚಳದ ಕುರಿತು ಚರ್ಚೆ ನಡೆಸಲಾಗುತ್ತದೆ.

ಎಲ್ಲಾ ಜಿಲ್ಲೆಗಳ ಹಾಲು ಒಕ್ಕೂಟಗಳ ಅಧ್ಯಕ್ಷರು ದರ ಹೆಚ್ಚಳಕ್ಕೆ ಮನವಿ ಮಾಡಿದ್ದಾರೆ. ಲೀಟರ್ ಗೆ 37 ರೂ.ನಿಂದ 40 ರೂ.ಗೆ ಏರಿಕೆಯಾದರೆ, ಹೆಚ್ಚಳವಾದ 3 ರೂ.ಗಳನ್ನು ರೈತರಿಗೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.


0 تعليقات

إرسال تعليق

Post a Comment (0)

أحدث أقدم