ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಉಚಿತ ಟ್ಯಾಬ್ ವಿತರಣಾ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಉಚಿತ ಟ್ಯಾಬ್ ವಿತರಣಾ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

 


ದಾವಣಗೆರೆ: ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಬರುವ ಸಫಾಯಿ ಕರ್ಮಚಾರಿಗಳು, ಮ್ಯಾನುಯಲ್ ಸ್ಕ್ಯಾವೆಂಜರ್‌ಗಳು ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರುಗಳಿಗೆ ನಿಗಮದಿಂದ ಅನುಷ್ಟಾನಗೊಳಿಸುತ್ತಿರುವ ಟ್ಯಾಬ್ ವಿತರಣಾ ಅವಧಿಯನ್ನು ಡಿ.31 ಎಂದು ನಿಗದಿಪಡಿಸಲಾಗಿತ್ತು.

ಪ್ರಯುಕ್ತ ಅರ್ಜಿಗಳನ್ನು ಸಲ್ಲಿಸಬೇಕಾದ ಅರ್ಹ ಫಲಾಫೇಕ್ಷಿಗಳು ನಿಗಮದ ವೆಬ್ ಸೈಟ್ www.ksskdc.kar.nic.in ಮೂಲಕ ಅವಶ್ಯ ದಾಖಲಾತಿಗಳೊಂದಿಗೆ ಜ.03 ರಿಂದ ಜ.31 ರೊಳಗೆ ಅಪ್ ಲೋಡ್ ಮಾಡಬಹುದು.

ಅರ್ಜಿ ಸಲ್ಲಿಸಿದ ಫಲಾಪೇಕ್ಷಿಗಳ ಅರ್ಜಿಗಳನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಆಯ್ಕೆ ಸಮಿತಿಯ ಮೂಲಕ ಆಯ್ಕೆ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ನಂ.337/16ಎ-16 ಗಣೇಶ್ ಲೇಔಟ್ 1ನೇ ಕ್ರಾಸ್, ಪಿ.ಬಿ.ರಸ್ತೆ, ದಾವಣಗೆರೆ. ಇವರನ್ನು ಸಂಪರ್ಕಿಸಬಹುದೆಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


0 Comments

Post a Comment

Post a Comment (0)

Previous Post Next Post