ಬಾಗಲಕೋಟೆ: ವಜಾಗೊಂಡಿರುವ ಸಾರಿಗೆ ನೌಕರರನ್ನು ಮತ್ತೆ ಸೇರ್ಪಡೆ ಮಾಡಿಕೊಳ್ಳಲು ನಾಲ್ಕು ವಾರ ಅವಕಾಶ ನೀಡಲಾಗಿದೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ.
ಮುಷ್ಕರ, ಪ್ರತಿಭಟನೆಯಲ್ಲಿ ಪಾಲ್ಗೊಂಡು ವಜಾಗೊಂಡಿರುವ ಸಾರಿಗೆ ನೌಕರರ ಕುಟುಂಬದ ಸ್ಥಿತಿ ಗತಿ ನೋಡಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ನೌಕರರು ಮುಷ್ಕರ ಕೈಗೊಳ್ಳುವ ಬದಲು ಸರ್ಕಾರದೊಂದಿಗೆ ಮಾತುಕತೆ ನಡೆಸಿ ಸೌಹಾರ್ದಯುತವಾಗಿ ಬೇಡಿಕೆ ಈಡೇರಿಸಿಕೊಳ್ಳಬೇಕು ಎಂದು ಸಚಿವರು ಸಲಹೆ ನೀಡಿದ್ದಾರೆ.
إرسال تعليق