ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಉಚಿತ ಆರೋಗ್ಯ ಮತ್ತು ಮಾಹಿತಿ ಶಿಬಿರ

ಉಚಿತ ಆರೋಗ್ಯ ಮತ್ತು ಮಾಹಿತಿ ಶಿಬಿರ


ಮಂಗಳೂರು: ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕರ್ನಾಟಕ ರಾಜ್ಯ ಶಾಖೆಯ ಶತಮಾನೋತ್ಸವ ಸಮಾರಂಭದ ಅಂಗವಾಗಿ, ಸಾರ್ವಜನಿಕರಿಗೆ (5 ವರ್ಷ ಮೇಲ್ಪಟ್ಟವರು) ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ವಿಶ್ವವಿದ್ಯಾನಿಲಯ ʼಮಂಗಳ- ಗ್ರಾಮʼ ದತ್ತು ಯೋಜನೆ, ಮಂಗಳಗಂಗೋತ್ರಿಯ ಯುವ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ  ಸೇವಾ ಯೋಜನೆ, ದೇರಳಕಟ್ಟೆಯ ಯೆನೆಪೋಯ (ಪರಿಗಣಿಸಲ್ಪಟ್ಟ) ವಿಶ್ವವಿದ್ಯಾನಿಲಯ ಹಾಗೂ ಜನ ಶಿಕ್ಷಣ ಟ್ರಸ್ಟ್, ಮಂಗಳೂರು ಇದರ ಜಂಟಿ ಸಹಭಾಗಿತ್ವದಲ್ಲಿ ಫೆಬ್ರವರಿ 2 (ಬುಧವಾರ) ರಂದು ಪೂರ್ವಾಹ್ನ 9:00 ಗಂಟೆಯಿಂದ ಸಂಜೆ 4:00 ಗಂಟೆಯವರೆಗೆ ಜನ ಶಿಕ್ಷಣ ಟ್ರಸ್ಟ್  ಸಭಾಂಗಣ, ಮುಡಿಪು ಇಲ್ಲಿ ಬೃಹತ್ ಉಚಿತ ಆರೋಗ್ಯ ಮತ್ತು ಕ್ಯಾನ್ಸರ್ ತಪಾಸಣೆ ಹಾಗೂ ಮಾಹಿತಿ ಶಿಬಿರ ಆಯೋಜಿಸಲಾಗಿದೆ.  


ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಅವರು ಶಿಬಿರ ಉದ್ಘಾಟಿಸಲಿದ್ದಾರೆ. ಭಾರತೀಯ ರೆಡ್ ಕ್ರಾಸ್ ಸಂಸ್ಥೆ  ದಕ್ಷಿಣ ಕನ್ನಡ ಜಿಲ್ಲೆ ಇದರ ಸಭಾಪತಿ ಸಿ.ಎ. ಶಾಂತರಾಮ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಯೆನೆಪೋಯ ವಿಶ್ವವಿದ್ಯಾನಿಲಯದ ಕುಲಪತಿ ಡಾ. ಎಂ. ವಿಜಯ್ ಕುಮಾರ್, ಮಾಜಿ ಓಂಬುಡ್ಸ್ಮನ್ ಮಹಾತ್ಮ ಗಾಂಧಿ ನರೇಗಾ ಮಾಜಿ ನಿರ್ದೇಶಕ ಎನ್.  ಶೀನ ಶೆಟ್ಟಿ, ಜನ ಶಿಕ್ಷಣ ಟ್ರಸ್ಟ್ ಸಹ ನಿರ್ದೇಶಕ ಕೃಷ್ಣ ಮೂಲ್ಯ ಇವರು ಮುಖ್ಯ ಅತಿಥಿಗಳಾಗಿರಲಿದ್ದಾರೆ. ಯೆನೆಪೋಯ ವೈದ್ಯಕೀಯ ಕಾಲೇಜು, ದೇರಳಕಟ್ಟೆ ಇದರ ಮುಖ್ಯಸ್ಥ, ಸಮುದಾಯ ಕ್ಯಾನ್ಸರ್ ರೋಗ ತಜ್ಞ ಡಾ. ಇಬ್ರಾಹಿಂ ನಾಗನೂರ್, ಯೆನೆಪೋಯ ವೈದ್ಯಕೀಯ ಕಾಲೇಜಿನ ಸ್ತ್ರೀರೋಗ ಕ್ಯಾನ್ಸರ್ ತಜ್ಞ ಡಾ. ಮರಿಯಮ್ ಅಂಜುಮ್ ಇಪ್ತಿಕಾರ್ ಮತ್ತು ಇನ್ನಿತರ ತಜ್ಞ ವೈದ್ಯರ ತಂಡವಿರಲಿದೆ.


ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ (ಆಡಳಿತ) ಪ್ರೊ. ಕಿಶೋರ್ ಕುಮಾರ್ ಸಿ. ಕೆ  ಉಪಸ್ಥಿತರಿರಲಿದ್ದಾರೆ. ಯೆನೆಪೋಯ ನರ್ಸಿಂಗ್ ಕಾಲೇಜಿನ ಯುವ ರೆಡ್ ಕ್ರಾಸ್ ಕಾರ್ಯಕ್ರಮ ಅಧಿಕಾರಿ ನಿತ್ಯಾಶ್ರೀ ಬಿ ವಿ, ಮಂಗಳೂರು ವಿವಿ ಯುವ ರೆಡ್ ಕ್ರಾಸ್ ಕಾರ್ಯಕ್ರಮ ಅಧಿಕಾರಿ ಡಾ. ಪರಮೇಶ್ವರ,   ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಅಧಿಕಾರಿ ಡಾ. ಗೋವಿಂದರಾಜು ಬಿ ಎಂ, ಮಂಗಳ - ಗ್ರಾಮ ದತ್ತು ಯೋಜನೆ ಸಂಯೋಜಕ ಪ್ರಶಾಂತ ನಾಯ್ಕ, ಭಾರತೀಯ ರೆಡ್ ಕ್ರಾಸ್ ಜಿಲ್ಲಾ ಉಪಸಮಿತಿ ನಿರ್ದೇಶಕ ಸಚೇತ್ ಸುವರ್ಣ, ಮಂಗಳೂರು ವಿವಿ ರೆಡ್‌ ಕ್ರಾಸ್ ನೋಡಲ್ ಅಧಿಕಾರಿ ಡಾ. ಗಣಪತಿ ಗೌಡ,  ಯೆನೆಪೋಯ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಡಾ. ಲೀನಾ ಕೆ. ಸಿ, ಭಾರತೀಯ ರೆಡ್ ಕ್ರಾಸ್ ಜಿಲ್ಲಾ ಗೌರವ ಕಾರ್ಯದರ್ಶಿ ಬಿ. ಕುಸುಮಾಧರ ಕಾರ್ಯಕ್ರಮ ಸಂಘಟಿಸಲಿರುವರು.


ಜ್ವರ, ಕೆಮ್ಮು, ಕಫ, ಉಸಿರಾಟದ ತೊಂದರೆ, ರಕ್ತದೊತ್ತಡ, ಮಧುಮೇಹ, ಹೃದಯದ ರಕ್ತನಾಳಗಳ ಖಾಯಿಲೆಗಳು, ಕ್ಯಾನ್ಸರ್, ಹೊಟ್ಟೆಬಾಧೆ, ಮೂಳೆ ಸಮಸ್ಯೆ, ಚರ್ಮ ರೋಗ, ಕಣ್ಣು, ಕಿವಿ, ಮೂಗಿಗೆ ಸಂಬಂಧಿಸಿದ ಹಾಗೂ ಇತರ ಯಾವುದೇ ಆರೋಗ್ಯ ಸಮಸ್ಯೆಗಳ ತಪಾಸಣೆ ನಡೆಸಿ ಸೂಕ್ತ ಚಿಕ್ತಿತ್ಸೆಗೆ ಅವಕಾಶ ಮಾಡಿಕೊಡಲಾಗುವುದು. ಸಾರ್ವಜನಿಕರು ಇದರ ಗರಿಷ್ಠ ಪ್ರಯೋಜನ ಪಡೆದುಕೊಳ್ಳಬೇಕು, ಎಂದು ಪ್ರಕಟಣೆಯಲ್ಲಿ ವಿಜ್ಞಾಪಿಸಲಾಗಿದೆ. 


ಹೆಚ್ಚಿನ ಮಾಹಿತಿಗಾಗಿ: ಡಾ.ಪ್ರಶಾಂತ ನಾಯ್ಕ, ಸಂಯೋಜಕರು, ಮಂಗಳ - ಗ್ರಾಮ ದತ್ತು ಯೋಜನೆ, ಮಂಗಳೂರು ವಿಶ್ವವಿದ್ಯಾನಿಲಯ, ಮೊಬೈಲ್-  94819 60327 


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم