ಹನೂರು: ಯುವಕನೊಬ್ಬ ಹೊಗನೇಕಲ್ ಫಾಲ್ಸ್ ನಲ್ಲಿ ಫೋಟೋ ತೆಗೆಸಿಕೂಳ್ಳಲು ಹೋಗಿ ಆಕಸ್ಮಿಕವಾಗಿ ಕಾಲುಜಾರಿ ನದಿಗೆ ಬಿದ್ದು ಸಾವನ್ನಪ್ಪಿದ ಘಟನೆಯೊಂದು ಮಲೆಮಹದೇಶ್ವರ ಬೆಟ್ಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಯುವಕನನ್ನು ನಂಜನಗೂಡು ಮೂಲದ ನಿವಾಸಿ ಎಂದು ಗುರುತಿಸಲಾಗಿದೆ.
ಬುಧವಾರ ಸಂಜೆ ಸ್ನೇಹಿತರ ಜೊತೆ ಹೊಗನೇಕಲ್ ಫಾಲ್ಸ್ ವೀಕ್ಷಣೆಗಾಗಿ ಬಂದಿದ್ದನೆನ್ನಲಾಗಿದೆ. ಈ ವೇಳೆ ನದಿಯ ಮಧ್ಯಭಾಗದಲ್ಲಿ ಫೋಟೋ ತೆಗೆಯಲು ಹೋದ ಯುವಕ ಆಕಸ್ಮಿಕವಾಗಿ ಕಾಲುಜಾರಿ ನದಿಗೆ ಬಿದ್ದು ನಾಪತ್ತೆಯಾಗಿದ್ದಾನೆ ಎಂದು ಹೇಳಲಾಗುತ್ತಿದೆ.
ನದಿಯಲ್ಲಿ ಯುವಕನ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿದಿದೆ. ಈ ಬಗ್ಗೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
إرسال تعليق