ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಶಾಲೆಯಲ್ಲಿ ಒಂದೇ ದಿನ 383 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆ

ಶಾಲೆಯಲ್ಲಿ ಒಂದೇ ದಿನ 383 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆ

 


ಹಾಸನ: ಹಾಸನ ಜಿಲ್ಲೆಯ ಶಾಲೆಗಳಲ್ಲಿ ಒಂದೇ ದಿನದಲ್ಲಿ 383 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಆದರೂ ಜಿಲ್ಲಾಡಳಿತ ಯಾವುದೇ ಕ್ರಮಕ್ಕೆ ಮುಂದಾಗದಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

20ಕ್ಕೂ ಹೆಚ್ಚು ಶಾಲೆಗಳಿಗೆ ಕೊರೊನಾ ಸೋಂಕು ಹರಡಿದೆ. ಪ್ರತಿ ಶಾಲೆಯಲ್ಲಿ 5ಕ್ಕಿಂತ ಹೆಚ್ಚು ಕೇಸ್ ಗಳು ಪತ್ತೆಯಾಗುತ್ತಿವೆ.

ಆದರೂ ಕೂಡ ಜಿಲ್ಲಾಡಳಿತ ಶಾಲೆಗಳಿಗೆ ರಜೆ ಘೋಷಿಸುವುದಾಗಲಿ, ಮಕ್ಕಳ ಆರೋಗ್ಯದ ಬಗ್ಗೆ ನಿಗಾವಹಿಸುವುದಾಗಿ ಮಾಡದೇ ಸುಮ್ಮನಿದ್ದಾರೆ.


ಶಾಲೆಗಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವುದರಿಂದ ಇದೀಗ ಶಿಕ್ಷಕರು, ಪೋಷಕರಲ್ಲಿಯೂ ಕೋವಿಡ್ ಭೀತಿ ಎದುರಾಗಿದೆ.

ಒಟ್ಟಾರೆ ಜಿಲ್ಲೆಯಾದ್ಯಂತ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚುವ ಆತಂಕದ ವಾತಾವರಣ ನಿರ್ಮಾಣವಾಗಿದೆ.


0 تعليقات

إرسال تعليق

Post a Comment (0)

أحدث أقدم