ಶ್ರೀರಂಗಪಟ್ಟಣ: ಶಾಲೆಗೆ ಮೊಬೈಲ್ ತಂದಿದ್ದಕ್ಕೆ ಮುಖ್ಯ ಶಿಕ್ಷಕಿ ವಿದ್ಯಾರ್ಥಿನಿಯ ಬಟ್ಟೆ ಬಿಚ್ಚಿಸಿ ಕೊಠಡಿಯಲ್ಲಿ ಕೂಡಿ ಹಾಕಿ ಅಮಾನವೀಯವಾಗಿ ನಡೆದ ಘಟನೆಯೊಂದು ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಅಮಾನವೀಯ ಘಟನೆ ನಡೆದಿದೆ.
ತರಗತಿಗೆ ಮೊಬೈಲ್ ತಂದಿದ್ದ 8ನೇ ತರಗತಿ ವಿದ್ಯಾರ್ಥಿನಿಯನ್ನು ಗಮನಿಸಿದ ಮುಖ್ಯ ಶಿಕ್ಷಕಿ ಸ್ನೇಹಲತಾ ಮತ್ತೊಂದು ಕೊಠಡಿಗೆ ಕರೆದೊಯ್ದು ಬಟ್ಟೆ ಬಿಚ್ಚಿಸಿ ಕೊಠಡಿಯಲ್ಲಿ ಕೂಡಿ ಹಾಕಿದ್ದಾರೆ.
ಮಗಳ ಜೊತೆ ಮುಖ್ಯ ಶಿಕ್ಷಕಿಯ ದೌರ್ಜನ್ಯ ವಿಷಯ ತಿಳಿದ ಪೋಷಕರು ಸ್ನೇಹಲತಾ ವಿರುದ್ದ ದೂರು ನೀಡಲು ಮುಂದಾಗಿದ್ದಾರೆ.
إرسال تعليق