ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 2021-22ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ರಾಜ್ಯದಲ್ಲಿ ಆರಂಭಿಸಿರುವ ಅತಿಥಿ ಉಪನ್ಯಾಸಕರ ನೇಮಕ ಪ್ರಕ್ರಿಯೆಗೆ ಉತ್ತಮ ಸ್ಪಂದನೆ ದೊರಕಿದೆ.
ಅರ್ಜಿಯನ್ನು ಸಲ್ಲಿಸಲು ಜನವರಿ 17ರಿಂದ ಅವಕಾಶ ನೀಡಲಾಗಿದ್ದು, ಗುರುವಾರ (ಜ.20) ವೇಳೆಗೆ 30 ಸಾವಿರಕ್ಕೂ ಹೆಚ್ಚು ಅರ್ಹ ಅಭ್ಯರ್ಥಿಗಳು ಆನ್-ಲೈನ್ ಮೂಲಕ ಅರ್ಜಿ ಹಾಕಿಕೊಂಡಿದ್ದಾರೆ ಎಂದು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ತಿಳಿಸಿದ್ದಾರೆ.
ರಾಜ್ಯ ಸರ್ಕಾರವು ಇತ್ತೀಚೆಗೆ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಬಳವನ್ನು ಎರಡೂವರೆ ಪಟ್ಟಿಗಿಂತ ಹೆಚ್ಚು ಏರಿಸಿದೆ. ಇದು ಅರ್ಹ ಅಭ್ಯರ್ಥಿಗಳಲ್ಲಿ ಸಕಾರಾತ್ಮಕ ಪರಿಣಾಮವನ್ನು ಉಂಟುಮಾಡಿದೆ ಎನ್ನುವುದಕ್ಕೆ ಇಷ್ಟೊಂದು ಪ್ರಮಾಣದಲ್ಲಿ ಅರ್ಜಿಗಳು ಬಂದಿರುವುದೇ ಸಾಕ್ಷಿ' ಎಂದಿದ್ದಾರೆ.
ಅಲ್ಲದೆ, ಅರ್ಜಿ ಹಾಕಿಕೊಳ್ಳಲು ಶುಕ್ರವಾರ (ಜ.21) ಮಧ್ಯರಾತ್ರಿ 12 ಗಂಟೆಯವರೆಗೂ ಅವಕಾಶವಿದೆ.
ಈ ವರೆಗೆ ಅರ್ಜಿಯನ್ನು ಹಾಕದೆ ಇರುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು. https://dec.karnataka/gov.in ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಅವರು ಹೇಳಿದ್ದಾರೆ.
إرسال تعليق