ಬೆಂಗಳೂರು: ನಗರದ ಕೋಣನಕುಂಟೆ ಬಳಿ ವೇಗವಾಗಿ ಬಂದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಮನ್ವಿ ಮೃತಪಟ್ಟಳು.
'ನನ್ನಮ್ಮ ಸೂಪರ್ ಸ್ಟಾರ್' ರಿಯಾಲಿಟಿ ಶೋ ಖ್ಯಾತಿಯ ಪ್ರತಿಭಾವಂತ ಬಾಲಕಿ ಸಮನ್ವಿ. ತಾಯಿ ಅಮೃತಾ ನಾಯ್ಡು ಜೊತೆ ಆಕೆ ಸ್ಕೂಟರ್ನಲ್ಲಿ ತೆರಳುತ್ತಿದ್ದಾಗ ರಸ್ತೆ ಅಪಘಾತ ಸಂಭವಿಸಿತು.
ಬೆಂಗಳೂರಿನ ಕೋಣನಕುಂಟೆ ಬಳಿ ಗುರುವಾರ ಜ.13 ರಂದು ವೇಗವಾಗಿ ಬಂದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಮನ್ವಿ ಮೃತಪಟ್ಟಿದ್ದಾಳೆ.
ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗಾಯಗೊಂಡಿರುವ ಅಮೃತಾ ನಾಯ್ಡು ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment