ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕಾರಂಬಡೆ: ಶ್ರೀ ಮಹಮ್ಮಾಯಿ ಕ್ಷೇತ್ರಕ್ಕೆ ಆಕರ್ಷಕ ಹೊರೆ ಕಾಣಿಕೆ ಮೆರವಣಿಗೆ

ಕಾರಂಬಡೆ: ಶ್ರೀ ಮಹಮ್ಮಾಯಿ ಕ್ಷೇತ್ರಕ್ಕೆ ಆಕರ್ಷಕ ಹೊರೆ ಕಾಣಿಕೆ ಮೆರವಣಿಗೆ



ಬಂಟ್ವಾಳ: ರೂ 2.5ಕೋಟಿ ವೆಚ್ಚದಲ್ಲಿ ಸಂಪೂರ್ಣ ಪುನರ್ ನವೀಕರಣಗೊಂಡ ಇಲ್ಲಿನ ಕಾರಣಿಕ ಪ್ರಸಿದ್ಧ ಕಾರಂಬಡೆ ಶ್ರೀ ಮಹಮ್ಮಾಯಿ ಕ್ಷೇತ್ರಕ್ಕೆ ಆಕರ್ಷಕ ಹೊರೆಕಾಣಿಕೆ ಮೆರವಣಿಗೆ ಶುಕ್ರವಾರ ಸಂಜೆ ಬಿ.ಸಿ.ರೋಡು ರಕ್ತೇಶ್ವರಿ ದೇವಿ ದೇವಸ್ಥಾನ ಬಳಿ ಹೊರಟಿತು.


ಕನ್ಯಾಡಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಮತ್ತು ಮಾಣಿಲ ಮೋಹನದಾಸ ಪರಮಹಂಸ ಸ್ವಾಮೀಜಿ ಮೆರವಣಿಗೆಗೆ ಚಾಲನೆ ನೀಡಿದರು. ಸಮಿತಿ ಗೌರವಾಧ್ಯಕ್ಷರಾದ ಶಾಸಕ ರಾಜೇಶ ನಾಯ್ಕ್, ಮಾಜಿ ಸಚಿವ ಬಿ.ರಮಾನಾಥ ರೈ, ಆಡಳಿತ ಮೊಕ್ತೇಸರ ಅರುಣ್ ಕುಮಾರ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಹರೀಶ ಕೋಟ್ಯಾನ್, ಬ್ರಹ್ಮಕಲಶ ಸಮಿತಿ ಅಧ್ಯಕ್ಷ ಕೆ.ಸೇಸಪ್ಪ ಕೋಟ್ಯಾನ್, ಕಾರ್ಯಾಧ್ಯಕ್ಷ ಬಿ.ವಾಸು ಪೂಜಾರಿ, ಪ್ರಮುಖರಾದ ಬೇಬಿ ಕುಂದರ್, ಭುವನೇಶ್ ಪಚ್ಚಿನಡ್ಕ, ದೇವಪ್ಪ ಕುಲಾಲ್, ಸೋಮಪ್ಪ ಕೋಟ್ಯಾನ್, ದೇವಪ್ಪ ಪೂಜಾರಿ ಬಾಲಿಕೆ, ಚಂದ್ರಪ್ರಕಾಶ ಶೆಟ್ಟಿ, ಕೆ.ಸಂಜೀವ ಪೂಜಾರಿ, ಮೆಲ್ಕಾರ್, ಕೇಶವ ಪೂಜಾರಿ ಅಸಲ್ದೋಡಿ, ಜಯಶಂಕರ ಕಾನ್ಸಾಲೆ, ಪ್ರಕಾಶ ಅಂಚನ್, ದೇವಪ್ಪ ಕರ್ಕೇರ ನೆಕ್ಕರೆಗುಳಿ, ಪುರುಷೋತ್ತಮ ಸಾಲ್ಯಾನ್, ಸುದರ್ಶನ್ ಬಜ, ಗೋಪಾಲ ಅಂಚನ್, ಯಶೋಧರ ಕರ್ಬೆಟ್ಟು, ಪ್ರೇಮನಾಥ ಶೆಟ್ಟಿ ಮತ್ತಿತರರು ಇದ್ದರು.



ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post