ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕಾವೂರು: ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣೆ

ಕಾವೂರು: ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣೆ

44 ಹಕ್ಕುಪತ್ರ, 32 ಸಂಧ್ಯಾ ಸುರಕ್ಷೆ, 29 ವಿಧವಾ ವೇತನ- ಶಾಸಕ ಭರತ್ ಶೆಟ್ಟಿ ಅವರಿಂದ ವಿತರಣೆ


ಮಂಗಳೂರು: ಸರಕಾರದ ಸೌಲಭ್ಯಗಳನ್ನು ಜನ ಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ತಳಮಟ್ಟದ ಜನಪ್ರತಿನಿಧಿಗಳು, ಅಧಿಕಾರಿಗಳು ಕೆಲಸ ಮಾಡಿದಾಗ ಮಾತ್ರ ಯಶಸ್ವಿಯಾಗಲು ಸಾಧ್ಯ ಎಂದು ಶಾಸಕರಾದ ಡಾ. ಭರತ್ ಶೆಟ್ಟಿ ವೈ ಹೇಳಿದರು.


ಅವರು ಕಾವೂರು ಗ್ರಾಮ ಕರಣಿಕ ಕಚೇರಿಯಲ್ಲಿ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿ ಮಾತನಾಡಿದರು.


ಹಲವಾರು ವರ್ಷಗಳಿಂದ ಮನೆ ಕಟ್ಟಿ ವಾಸಿಸುವ ಕುಟುಂಬಗಳಿಗೆ ಹಕ್ಕು ಪತ್ರ ದೊರಕಿದಾಗ ಸರಕಾರದ ಎಲ್ಲಾ ಯೋಜನೆಗಳ ಲಾಭ ಪಡೆಯಲು ಸಾಧ್ಯ ಎಂದರು. ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಬಡ ಕುಟುಂಬಗಳಿಗೆ ನೂರಾರು ಯೋಜನೆಗಳಿದ್ದು ಪಾಲಿಕೆ ವ್ಯಾಪ್ತಿಯಲ್ಲಿ ಬಿಜೆಪಿ ಪಾಲಿಕೆಯ ಸದಸ್ಯರು ಫಲಾನುಭವಿಗಳನ್ನು ಗುರುತಿಸುವಲ್ಲಿ ಉತ್ತಮ ಕಾರ್ಯ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.


44 ಹಕ್ಕುಪತ್ರ, 32 ಸಂಧ್ಯಾ ಸುರಕ್ಷೆ, 29 ವಿಧವಾ ವೇತನ ಪ್ರಮಾಣ ಪತ್ರ ವಿತರಣೆ ಹಾಗೂ 6 ಮಂದಿಗೆ ಅಂಗವಿಕಲ ಸೌಲಭ್ಯ ಪ್ರಮಾಣ ಪತ್ರ ವಿತರಿಸಲಾಯಿತು.


ಈ ಸಂದರ್ಭದಲ್ಲಿ ಉಪಮೇಯರ್ ಸುಮಂಗಳ ರಾವ್, ಮನಪಾ ಸದಸ್ಯರಾದ ಶರತ್ ಕುಮಾರ್, ಲೋಹಿತ್ ಅಮೀನ್, ಗಾಯತ್ರಿ ರಾವ್, ಕಿರಣ್ ಕುಮಾರ್, ಶ್ವೇತ ಪೂಜಾರಿ, ಬಿಜೆಪಿ ಮುಖಂಡರಾದ ಶಿತಿಶ್ ಕೊಂಡೆ, ಉಪ ತಹಶೀಲ್ದಾರ್ ನವೀನ್, ಕಂದಾಯ ಅಧಿಕಾರಿ ದೇವಿಪ್ರಸಾದ್ ಮಲ್ಯ ಮತ್ತಿತರರು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post