ಬಳ್ಳಾರಿ: ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಳ್ಳಾರಿಯ ಸಂಗನಕಲ್ಲು ಗ್ರಾಮದ ಬೈಪಾಸ್ ರಸ್ತೆಯಲ್ಲಿ ನಡೆದಿದೆ.
ನಿನ್ನೆ ತಡರಾತ್ರಿ ಬಳ್ಳಾರಿಯಿಂದ ಮೋಕಾ ಕಡೆಗೆ ಹೋಗುತ್ತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿದೆ.
ಅಪಘಾತದಲ್ಲಿ ಬೈಕ್ನಲ್ಲಿದ್ದ ಇಬ್ಬರು ಪುರುಷರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಮಹಿಳೆ ಗಂಭೀರ ಗಾಯಗೊಂಡಿದ್ದಾರೆ.
ಗಾಯಾಳುವನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪೊಲೀಸರು ಮೃತರ ಬಗ್ಗೆ ಮಾಹಿತಿ ವಿಚಾರಿಸುತ್ತಿದ್ದು, ಈ ಬಗ್ಗೆ ಬಳ್ಳಾರಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
إرسال تعليق