ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಲಾರಿ ಮತ್ತು ಬೈಕ್ ಅಪಘಾತ; ಮಹಿಳೆ ಸಾವು

ಲಾರಿ ಮತ್ತು ಬೈಕ್ ಅಪಘಾತ; ಮಹಿಳೆ ಸಾವು

 


ಬೆಂಗಳೂರು: ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಯುವತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆಯೊಂದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.

ನಗರದ ಗರುಡ ಮಾಲ್ ಬಳಿ ಈ ಘಟನೆ ನಡೆದಿದ್ದು, ಸಂಜನಾ ಪ್ರಿಯ ಎಂಬ ಯುವತಿ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ದೈವಿ ಎಂದು ಹೇಳಲಾಗಿದೆ.

ಬೆಳಿಗ್ಗೆ ತಿಂಡಿ ತಿನ್ನಲು ಅಣ್ಣ ತಂಗಿ ಬೈಕ್ ನಲ್ಲಿ ಹೋಗುತ್ತಿದ್ದಾಗ ಈ ಅವಘಡ ಸಂಭವಿಸಿದೆ.  ಯುವತಿಯ ಅಣ್ಣನ ಸ್ಥಿತಿ ಚಿಂತಾಜನಕವಾಗಿದ್ದು, ಘಟನೆ ನಡೆದ ಬಳಿಕ ಟಿಪ್ಪರ್ ಲಾರಿ ಸವಾರ ಪರಾರಿಯಾಗಿದ್ದಾನೆ.

ಸ್ಥಳಕ್ಕೆ ಅಶೋಕ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಈ ಬಗ್ಗೆ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


0 تعليقات

إرسال تعليق

Post a Comment (0)

أحدث أقدم