ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಟಿಪ್ಪರ್ ಲಾರಿ ಮತ್ತು ಬೈಕ್ ಅಪಘಾತ; ಇಬ್ಬರು ಸಾವು

ಟಿಪ್ಪರ್ ಲಾರಿ ಮತ್ತು ಬೈಕ್ ಅಪಘಾತ; ಇಬ್ಬರು ಸಾವು

 


ಮಂಗಳೂರು: ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಇಬ್ಬರು ಯುವಕರು ಮೃತಪಟ್ಟಿರುವ ಘಟನೆಯೊಂದು ಬೆಳ್ತಂಗಡಿ ತಾಲೂಕಿನ ಮದ್ದಡ್ಕದಲ್ಲಿ (ಜ.17) ರಾತ್ರಿ ನಡೆದಿದೆ.

ಮೃತ ಯುವಕರನ್ನು ನಾವೂರು ನಿವಾಸಿಗಳಾದ ಮಿಸ್ಪಾಯಿಲ್ (20) ಹಾಗೂ ಆಸ್ಪಾನ್ (19) ಎಂದು ಗುರುತಿಸಲಾಗಿದೆ.

ಡಿಕ್ಕಿ ಹೊಡೆದ ರಭಸಕ್ಕೆ ತೀವ್ರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಹಾಗೂ ಸಹಸವಾರ ಸ್ಥಳದಲ್ಲಿಯೇ ತೀವ್ರ ರಕ್ತಸ್ರಾವವಾಗಿ ಸಾವನ್ನಪ್ಪಿದರು.

ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.


0 تعليقات

إرسال تعليق

Post a Comment (0)

أحدث أقدم