ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಶಾಸಕ ಸಿ.ಟಿ.ರವಿಯವರ ತಂದೆ ನಿಧನ

ಶಾಸಕ ಸಿ.ಟಿ.ರವಿಯವರ ತಂದೆ ನಿಧನ

 


ಚಿಕ್ಕಮಗಳೂರು: ಬಿಜೆಪಿ ರಾಷ್ಟೀಯ ಕಾರ್ಯದರ್ಶಿ, ಶಾಸಕ ಸಿ.ಟಿ.ರವಿಯವರ ತಂದೆ ತಿಮ್ಮೇಗೌಡ (92) ವಯೋಸಹಜ ಸಮಸ್ಯೆಯಿಂದ ಶನಿವಾರ ಮೃತಪಟ್ಟಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಇತ್ತೀಚೆಗೆ ಬೆಂಗಳೂರಿನ ಖಾಸಗಿ ಆಸ್ಪತೆಗೆ ದಾಖಲಿಸಲಾಗಿತ್ತು.

ಶನಿವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ತಿಮ್ಮೇಗೌಡ ಅವರು ಪತ್ನಿ ಹೊನ್ನಮ್ಮ, ಪುತ್ರರಾದ ಸಿ.ಟಿ ರವಿ, ಸಿ.ಟಿ ರಘು, ಪುತ್ರಿಯರಾದ ರೇಣುಕಾ, ರೋಹಿಣಿ, ರೇವತಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

0 Comments

Post a Comment

Post a Comment (0)

Previous Post Next Post