ಮಂಗಳೂರು: ಕರ್ತವ್ಯದಲ್ಲಿದ್ದ ಪೊಲೀಸ್ ಮುಖ್ಯಪೇದೆ ಹೃದಯಾಘಾತದಿಂದ ಮೃತಪಟ್ಟ ಘಟನೆಯೊಂದು ವರದಿಯಾಗಿದೆ.
36 ವರ್ಷದ ಸಂತೋಷ್ ಮೃತರು. ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್‌ಟೇಬಲ್ ಆಗಿದ್ದ ಸಂತೋಷ್, ಅಪರಾಧ ಪ್ರಕರಣವೊಂದರ ತನಿಖೆ ಕಾರಣದಿಂದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಗೆ ಹೋಗಿದ್ದರು.
ಕರ್ತವ್ಯದಲ್ಲಿದ್ದ ಸಂತೋಷ್ ಅವರಿಗೆ ಮಂಗಳವಾರ ರಾತ್ರಿ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಸಂತೋಷ್ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರೂ ಬದುಕಲಿಲ್ಲ.
Post a Comment