ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಅಂಬೇಡ್ಕರ್ ಭಾವಚಿತ್ರ ತೆಗೆಸಿದ ಪ್ರಕರಣ: ನ್ಯಾಯಾಧೀಶರನ್ನು ಸೇವೆಯಿಂದ ವಜಾ ಮಾಡಲು ಶಾಸಕ ಹರ್ಷವರ್ಧನ ಆಗ್ರಹ

ಅಂಬೇಡ್ಕರ್ ಭಾವಚಿತ್ರ ತೆಗೆಸಿದ ಪ್ರಕರಣ: ನ್ಯಾಯಾಧೀಶರನ್ನು ಸೇವೆಯಿಂದ ವಜಾ ಮಾಡಲು ಶಾಸಕ ಹರ್ಷವರ್ಧನ ಆಗ್ರಹ



ನಂಜನಗೂಡು: ಗಣರಾಜ್ಯೋತ್ಸವ ಸಮಾರಂಭದ ವೇಳೆ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರ ಭಾವಚಿತ್ರವನ್ನು ತೆಗೆಸಿ ಹಾಕಿದ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಅವರನ್ನು ಸೇವೆಯಿಂದ ವಜಾ ಮಾಡುವಂತೆ ಶಾಸಕ ಹರ್ಷವರ್ಧನ್ ಆಗ್ರಹಿಸಿದ್ದಾರೆ.


ಈ ಕುರಿತು ಕಾನೂನು ಮತ್ತು ಸಂಸದೀಯ ವ್ಯವವಹಾರ ಸಚಿವರಾದ ಜೆ.ಸಿ. ಮಾಧುಸ್ವಾಮಿ ಅವರಿಗೆ ಪತ್ರ ಬರೆದಿರುವ ಹರ್ಷವರ್ಧನ್, ರಾಯಚೂರಿನಲ್ಲಿ 73ನೇ ಗಣರಾಜ್ಯೋತ್ಸವ ಸಮಾರಂಭದ ವೇಳೆ ಇಂತಹ ಅವಮಾನಕರ ಘಟನೆ ನಡೆದಿದೆ. ಈ ಘಟನೆ ನಡೆಯಬಾರದಿತ್ತು. ಸಂವಿಧಾನ ಹಾಗೂ ಶಿಷ್ಟಾಚಾರವನ್ನು ಪಾಲಿಸಿ ಇತರರಿಗೆ ಮಾದರಿಯಾಗಬೇಕಿದ್ದ ನ್ಯಾಯಧೀಶ ಮಲ್ಲಿಕಾರ್ಜುನ ಗೌಡ ಇಂತಹ ಹೆಜ್ಜೆ ಇಟ್ಟು ಸಂವಿಧಾನ ಶಿಲ್ಪಿಗೆ ಅಪಮಾನ ಮಾಡಿದ್ದಾರೆ. ಕೂಡಲೇ ಅವರನ್ನು ಅವರ ಸ್ಥಾನದಿಂದ ವಜಾಗೊಳಿಸಬೇಕು. ಘಟನೆ ಸಂಬಂಧ ಎಲ್ಲಾ ವರದಿಗಳನ್ನು ತರಿಸಿಕೊಂಡು, ತನಿಖೆ ನಡೆಸಿ, ಸಚಿವ ಮಾಧುಸ್ವಾಮಿ ಅವರು ಸೂಕ್ತ ಕ್ರಮ ತೆಗೆದುಕೊಳ್ಳುತ್ತಾರೆನ್ನುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.




ಹೆಚ್ಚಿನ ವಿವರಗಳಿಗೆ ಸಂಪರ್ಕಿಸಬಹುದು-

ಬಿ. ಹರ್ಷವರ್ಧನ್

ಶಾಸಕರು - ನಂಜನಗೂಡು

M: 99010 99955 

Email:: bharshavardhan.mla@gmail.com


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ



0 Comments

Post a Comment

Post a Comment (0)

Previous Post Next Post