ಮಂಗಳೂರು: ಕೇಂದ್ರ ಸರಕಾರ ಪದ್ಮಶ್ರೀ ಪ್ರಶಸ್ತಿಗಳನ್ನು ಘೋಷಣೆ ಮಾಡಿದ್ದು, ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳದ ಕೃಷಿಕ ಅಮೈ ಮಹಾಲಿಂಗ ನಾಯ್ಕ ಅವರು ದೇಶದ ಅತ್ಯುನ್ನತ ಪ್ರಶಸ್ತಿ ಪದ್ಮಶ್ರೀಗೆ ಆಯ್ಕೆಯಾಗಿದ್ದಾರೆ.
ಗಣರಾಜ್ಯೋತ್ಸವ ಕಾರಣ ಇಂದು ಪದ್ಮಶ್ರೀ ಪ್ರಶಸ್ತಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಕರ್ನಾಟಕಕ್ಕೆ ಈ ಬಾರಿ 5 ಪದ್ಮಶ್ರೀ ಪ್ರಶಸ್ತಿ ದೊರೆತಿದೆ.
ಅದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಗತಿ ಪರ ಕೃಷಿಕ ಅಮೈ ಮಹಾಲಿಂಗ ನಾಯ್ಕ ಅವರಿಗೆ ಪದ್ಮಶ್ರೀ ಪುರಸ್ಕಾರ ದೊರೆತಿದೆ.
ಬಂಟ್ವಾಳ ತಾಲೂಕಿನ ಅಡ್ಯನಡ್ಕ ಸಮೀಪದ ಅಮೈ ನಿವಾಸಿ ಮಹಾಲಿಂಗ ನಾಯ್ಕ ಅವರು ಏಕಾಂಗಿಯಾಗಿ ಅಪೂರ್ವ ಮತ್ತು ಅಪಾಯಕಾರಿಯಾದ ಕೆಲಸದ ಮೂಲಕ ಜೀವಜಲವನ್ನು ತರಿಸಿ ಬೋಳು ಗುಡ್ಡೆಯನ್ನು ನಂದನವನ ಮಾಡಿದ ಪ್ರಯತ್ನಶೀಲ, ಪ್ರಗತಿಪರ ಕೃಷಿಕ.
ಕೃಷಿಗೆ ನೀರು ಹಾಯಿಸಲು ಪಂಪ್ ಸೆಟ್ಗಳ ಸೌಲಭ್ಯಗಳೇ ಇಲ್ಲದ ಕಾಲದಲ್ಲಿ ಹಿಂದಿನ ತಲೆಮಾರಿನವರು ಅವಲಂಭಿಸಿದ್ದ ಸುರಂಗ ನೀರಿನ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟು, ಇದೇ ವ್ಯವಸ್ಥೆಯಲ್ಲಿ ವಿದ್ಯುತ್ ರಹಿತವಾಗಿ ಗ್ರಾವಿಟಿ ನೆರವಿನಲ್ಲಿ ಕೃಷಿಗೆ ತುಂತುರು ನೀರಾವರಿ, ಸ್ಟ್ರಿಂಕ್ಲರ್ ನೀರಾವರಿ ವ್ಯವಸ್ಥೆಯನ್ನು ಕಲ್ಪಿಸುವಲ್ಲಿ ಯಶಸ್ವಿಯಾಗಿರುವ ಮಹಾಲಿಂಗ ನಾಯ್ಕ ಅವರು ಏಕಾಂಗಿಯಾಗಿ ಏಳು ಸುರಂಗಗಳನ್ನು ಕೊರೆದಿದ್ದಾರೆ.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
Post a Comment