ಸಾಂದರ್ಭಿಕ ಚಿತ್ರ
ಚೆನ್ನೈ: ಸಾಕು ನಾಯಿಯೊಂದು ಬಾಲಕಿಗೆ ಕಚ್ಚಿ ಗಂಭೀರ ಗಾಯಗೊಳಿಸಿದ ಪರಿಣಾಮ ಪೊಲೀಸರು ಮಾಲಕಿಯನ್ನು ಬಂಧಿಸಿದ ಘಟನೆ ಚೆನ್ನೈನಲ್ಲಿ ನಡೆದಿದೆ.
ಜರ್ಮನ್ ಶೆಫರ್ಡ್ ಜಾತಿಯ ನಾಯಿ ಬಾಲಕಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲವು ಬಾರಿ ಕಚ್ಚಿದ್ದರಿಂದ ಆಕೆಗೆ ಗಂಭೀರ ಗಾಯವಾಗಿದೆ. ಇದರಿಂದಾಗಿ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ನಾಯಿ ಕಚ್ಚುತ್ತಿರುವ ದೃಶ್ಯಗಳು ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ಬಗ್ಗೆ ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದರು.
ಹೀಗಾಗಿ ಸಿಸಿಟಿವಿ ಆಧರಿಸಿ ಪೊಲೀಸರು ತನಿಖೆ ನಡೆಸಿದ್ದು, ಮಾಲಕಿಯ ವಿರುದ್ಧ ಕ್ರಮ ಕೈಗೊಂಡಿದ್ದಾರೆ.
إرسال تعليق