ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ

 


ನವದೆಹಲಿ: ಪ್ರಧಾನಿ ಮೋದಿ ಅವರು ಗುರುವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿದರು. ಪಂಜಾಬ್ ಪ್ರವಾಸದ ವೇಳೆ ಎದುರಾದ ಭದ್ರತಾ ವೈಫಲ್ಯಗಳ ಬಗ್ಗೆ ಮಾಹಿತಿ ನೀಡಿದರು. ಘಟನೆಯ ಬಗ್ಗೆ ತೀವ್ರ ಕಳವಳ ವ್ಯಕ್ತವಾಗಿದೆ.

ಅದೇ ರೀತಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಕೂಡ ಪ್ರಧಾನಿಗೆ ದೂರವಾಣಿ ಕರೆ ಮಾಡಿದ್ದಾರೆ. ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದರು.

ಆದರೆ ನಿನ್ನೆ ಪಂಜಾಬ್ ಪ್ರವಾಸದಲ್ಲಿದ್ದ ಮೋದಿ ಅವರನ್ನು ಪ್ರತಿಭಟನಾ ಕಾರರು ತಡೆದಿದ್ದು, ಫ್ಲೈಓವರ್ ಮೇಲೆ 20 ನಿಮಿಷಗಳ ಕಾಲ ಟ್ರಾಫಿಕ್ ನಲ್ಲಿ ಸಿಲುಕಿ ಭೇಟಿ ರದ್ದುಗೊಳಿಸಿದ್ದಾರೆ.

ಪ್ರಧಾನಿಗೆ ಭದ್ರತೆ ವಿಷಯದಲ್ಲಿ ಪಂಜಾಬ್ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ಆಕ್ರೋಶ ವ್ಯಕ್ತಪಡಿಸಿದೆ. ಈ ವಿಚಾರವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಮಾತಿನ ಚಕಮಕಿ ಮುಂದುವರಿದಿದೆ.

ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم