ಪುಂಜಾಲಕಟ್ಟೆ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇದರ ಆಶ್ರಯದಲ್ಲಿ ಪುಂಜಾಲಕಟ್ಟೆ ಪೊಲೀಸ್ ಠಾಣೆ ಇದರ ಸಹಭಾಗಿತ್ವದೊಂದಿಗೆ ಮಂಗಳವಾರ (ಜ.11) "ತುರ್ತು ಸ್ಪಂದನ ಸಹಾಯ ವ್ಯವಸ್ಥೆ ಹಾಗೂ ವ್ಯಸನ ಮುಕ್ತ ಭಾರತ" ಕಾರ್ಯಕ್ರಮವು ನಡೆಯಿತು.
ಕಾರ್ಯಕ್ರಮದಲ್ಲಿ ಠಾಣೆಯ ಸಬ್ ಇನ್ಸ್ಪೆಕ್ಟರ್ ಸುತೇಶ್ ಇವರು ಮಾತನಾಡಿ ತುರ್ತು ಸ್ಪಂದನ ಸಹಾಯವಾಣಿಯ ಕಾರ್ಯ ವೈಖರಿ ಸಾರ್ವಜನಿಕರಿಗೆ ಇದರಿಂದಾಗುವ ಉಪಯೋಗ ಹಾಗೂ ವ್ಯಸನ ಮುಕ್ತ ಸಮಾಜದ ನಿರ್ಮಾಣಕ್ಕಾಗಿ ಈ-ಪ್ಲೆಡ್ಜ್ ಅನ್ನು ತೆಗೆದುಕೊಳ್ಳುವುದರ ಬಗೆಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಈ ಕಾರ್ಯಕ್ರಮದಲ್ಲಿ ಠಾಣೆಯ ಸಿಬ್ಬಂದಿಗಳು ಹಾಗೂ ಕಾಲೇಜಿನ ಉಪನ್ಯಾಸಕರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ರವಿಶಂಕರ್ ಬಿ. ಅವರು ವಿದ್ಯಾರ್ಥಿ ನೆಲೆಯಲ್ಲಿ ಮಾಡಬೇಕಾದ ಕರ್ತವ್ಯಗಳು ಹಾಗೂ ದೇಶದ ಸತ್ಪ್ರಜೆಯಾಗಲು ವಿದ್ಯಾರ್ಥಿಗಳಲ್ಲಿ ಇರಬೇಕಾದ ಮೌಲ್ಯಗಳ ಬಗೆಗೆ ಮಾತನಾಡಿದರು. ಕಾರ್ಯಕ್ರಮದ ಸಂಪೂರ್ಣ ಪ್ರಯೋಜನವನ್ನು ವಿದ್ಯಾರ್ಥಿಗಳು ಪಡೆದುಕೊಂಡರು.
ಕಾಲೇಜಿನ ಆಂಗ್ಲ ಭಾಷಾ ವಿಭಾಗದ ಮುಖ್ಯಸ್ಥರಾದ ಪ್ರೊ ಆಂಜನೇಯ ಎಂ.ಎನ್. ಅವರು ಸ್ವಾಗತಿಸಿ, ನಿರೂಪಿಸಿ ಧನ್ಯವಾದವಿತ್ತರು.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق