ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪುಂಜಾಲಕಟ್ಟೆ ಕಾಲೇಜಿನಲ್ಲಿ ಯುವ ಸಪ್ತಾಹ: ಸ್ವಾಮಿ ವಿವೇಕಾನಂದರ ಕುರಿತು ವಿಶೇಷ ಉಪನ್ಯಾಸ

ಪುಂಜಾಲಕಟ್ಟೆ ಕಾಲೇಜಿನಲ್ಲಿ ಯುವ ಸಪ್ತಾಹ: ಸ್ವಾಮಿ ವಿವೇಕಾನಂದರ ಕುರಿತು ವಿಶೇಷ ಉಪನ್ಯಾಸ


ಪುಂಜಾಲಕಟ್ಟೆ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇದರ ಆಶ್ರಯದಲ್ಲಿ ರೋವರ್ಸ್ ಮತ್ತು ರೇಂಜರ್ಸ್ ಘಟಕ ಹಾಗೂ ನಿರ್ವಹಣಾ ವಿಭಾಗದ ಸಹಭಾಗಿತ್ವದಲ್ಲಿ 'ಆಜಾದಿ ಕಾ ಅಮೃತ್ ಮಹೋತ್ಸವ' ಇದರ ಅಡಿಯಲ್ಲಿ 'ಯುವ ಸಪ್ತಾಹ' ದ ಭಾಗವಾಗಿ "Inauguration & Talk on Swami Vivekananda" ಕಾರ್ಯಕ್ರಮವು ನಡೆಯಿತು.


ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ, ನಿವೃತ್ತ ಸೈನಿಕರಾದ ಬೆಳ್ಳಾಲ ಗೋಪಿನಾಥ್ ರಾವ್ ಅವರು ಮಾತನಾಡಿ ಸ್ವಾಮಿ ವಿವೇಕಾನಂದರ ತತ್ತ್ವ, ಆದರ್ಶಗಳು, ಅವರ ಜೀವನದಿಂದ ಸ್ಫೂರ್ತಿ ಪಡೆದ ಮಹನೀಯರು, ಶಾರೀರಿಕ, ಮಾನಸಿಕ ಸಮತೋಲನ ವಿದ್ಯಾರ್ಥಿಗಳಾಗಿ ಸ್ವಾಮಿ ವಿವೇಕಾನಂದರ ಬಗೆಗೆ ತಿಳಿದುಕೊಳ್ಳುವ ಅವಶ್ಯಕತೆ ಇದರ ಬಗೆಗೆ ತಮ್ಮ ವಿಚಾರಧಾರೆಗಳನ್ನು ಹಂಚಿಕೊಂಡರು.


ಕಾಲೇಜಿನ ಆಂಗ್ಲ ಭಾಷಾ ವಿಭಾಗದ ಮುಖ್ಯಸ್ಥರು ಹಾಗೂ ರೋವರ್ಸ್ ಘಟಕದ ಸಂಚಾಲಕರಾದ ಪ್ರೊ. ಆಂಜನೇಯ ಎಂ.ಎನ್. ಇವರು ಮಾತನಾಡಿ ಯುವಜನತೆಗೆ ಸ್ವಾಮಿ ವಿವೇಕಾನಂದರ ಜೀವನವು ಆದರ್ಶವಾಗಬೇಕು ಎಂದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಗ್ರಂಥಪಾಲಕರಾದ ಪ್ರೊ. ಖಂಡೋಜಿ ಲಮಾಣಿ ಅವರು ಸ್ವಾಮಿ ವಿವೇಕಾನಂದರ ನುಡಿಮುತ್ತುಗಳ ಬಗೆಗೆ ಮಾತನಾಡಿದರು.


ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕ ವರ್ಗ ರೋವರ್ಸ್ & ರೇಂಜರ್ಸ್ ಮತ್ತು ನಿರ್ವಹಣಾ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಕಾರ್ಯಕ್ರಮವನ್ನು ರೋವರ್ ಕೀರ್ತಿ ಇವರು ಸ್ವಾಗತಿಸಿ ಅಶ್ವಿನಿ ಧನ್ಯವಾದವಿತ್ತರು. ರಶ್ಮಿ ಇವರು ಅತಿಥಿಗಳ ಕಿರು ಪರಿಚಯವನ್ನು ನಡೆಸಿಕೊಟ್ಟರು. ರೋವರ್ ಶಮೀರ್ ಕಾರ್ಯಕ್ರಮ ನಿರೂಪಿಸಿದರು.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ




0 تعليقات

إرسال تعليق

Post a Comment (0)

أحدث أقدم