ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪುಂಜಾಲಕಟ್ಟೆ: ಮಳೆನೀರು ಕೊಯ್ಲು ಜಾಗೃತಿ ಕಾರ್ಯಕ್ರಮ

ಪುಂಜಾಲಕಟ್ಟೆ: ಮಳೆನೀರು ಕೊಯ್ಲು ಜಾಗೃತಿ ಕಾರ್ಯಕ್ರಮ


ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ, ಆಂತರಿಕ ಗುಣಮಟ್ಟ ಭರವಸೆ ಕೋಶ, ರಾಷ್ಟ್ರೀಯ ಸೇವಾ ಯೋಜನೆ (ಘಟಕ 1 & 2) ನೆಹರು ಯುವಕೇಂದ್ರ ಮಂಗಳೂರು ಮತ್ತು ಮುರುಘೇಂದ್ರ ಮಿತ್ರಮಂಡಳಿ ಪುಂಜಾಲಕಟ್ಟೆ ಇದರ ಜಂಟಿ ಆಶ್ರಯದಲ್ಲಿ "ಮಳೆ ನೀರು ಕೊಯ್ಲು ಅಭಿಯಾನ" ಕಾರ್ಯಕ್ರಮ ಆಯೋಜಿಸಲಾಗಿತ್ತು. ತಾಲೂಕು ಸಂಯೋಜಕ ಲೀಕ್ಷಿತ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಮುರುಘೇಂದ್ರ ಮಿತ್ರ ಮಂಡಳಿ ಗೌರವಾಧ್ಯಕ್ಷ ಮೋಹನ್ ಸಾಲಿಯಾನ್ ಕಾರ್ಯಕ್ರಮ ಉದ್ಘಾಟಿಸಿದರು.


ಕಾಲೇಜಿನ IQAC ಸಂಚಾಲಕ ಡಾ.ಲೋಕೇಶ್ ಇವರು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ದಕ್ಷಿಣ ಕನ್ನಡ ನಿರ್ಮಿತ ಕೇಂದ್ರ ಸುರತ್ಕಲ್‌ನ ಕಾರ್ಯನಿರ್ವಾಹಕ ನಿರ್ದೇಶಕ ರಾಜೇಂದ್ರ ಕಲ್ಬಾವಿ ಇವರು ಆಗಮಿಸಿ ನೀರಿನ ಮಹತ್ವದ ಬಗ್ಗೆ ಅರಿವು ಮೂಡಿಸಿದರು ಹಾಗೂ ತಮ್ಮ ಅನುಭವವನ್ನು ಹಂಚಿಕೊಂಡರು.


ರಚನಾ, ಸ್ವಯಂ ಸೇವಕರು ನೆಹರು ಯುವಕೇಂದ್ರ ಮಂಗಳೂರು ಹಾಗೂ ಸಾಂತಪ್ಪ ಜಿಲ್ಲಾ ಯುವ ಪರಿವರ್ತಕರು, ನೆಹರು ಯುವಕೇಂದ್ರ ಮಂಗಳೂರು ಹಾಜರಿದ್ದರು. ಹಾಗೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾ ಅಧಿಕಾರಿಗಳಾದ ಪ್ರೊ. ರಾಜೇಶ್ವರಿ ಹೆಚ್ ಎಸ್ ಹಾಗೂ ಸಂತೋಷ್ ಪ್ರಭು ಎಂ  ಇವರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು ಹಾಜರಿದ್ದರು. ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಾದ ಹರ್ಷಿತಾ ಇವರು ಸ್ವಾಗತಿಸಿ, ರಾಜೇಶ್ವರಿ  ಧನ್ಯವಾದವನ್ನು ಸಮರ್ಪಿಸಿದರು. ಜಮಿತ ಕಾರ್ಯಕ್ರಮವನ್ನು ನಿರೂಪಿಸಿದರು.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post