ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಸಂಪ್ಯ ಪೊಲೀಸರಿಂದ ಸುಲಿಗೆಕೋರರ ಬಂಧನ

ಸಂಪ್ಯ ಪೊಲೀಸರಿಂದ ಸುಲಿಗೆಕೋರರ ಬಂಧನ



ಪುತ್ತೂರು: ವ್ಯಕ್ತಿಯೊಬ್ಬರಿಗೆ ಕರೆ ಮಾಡಿ ಬೆದರಿಕೆಯೊಡ್ಡಿ, ಹಣ ವಸೂಲಿ ಮಾಡಲು ಯತ್ನಿಸಿದ  ಇಬ್ಬರು ರೌಡಿ ಶೀಟರ್‌ಗಳನ್ನು ಸಂಪ್ಯ ಠಾಣಾ ಎಸ್. ಐ.  ಉದಯ ರವಿ ನೇತೃತ್ವದ ಪೊಲೀಸರ ತಂಡ ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ನಡೆಸಿ  ಬಂಧಿಸಿದ್ದಾರೆ.


ಬಂಟ್ವಾಳ ತಾಲೂಕು ಗೋಳ್ತಮಜಲು ಕಲ್ಲಡ್ಕ ಮಸೀದಿ ಬಳಿ ನಿವಾಸಿ  ಅಬ್ದುಲ್ಲಾ ಅವರ ಪುತ್ರ ಖಲಂದರ್ ಶರೀಫ್‌ ಶಾಫಿ ಹಾಗೂ ಮಂಗಳೂರು ಮಂಜನಾಡಿ ಕುಚ್ಚಿಗದ್ದೆ ಹಂಝ ಅವರ ಪುತ್ರ ಹಸನಬ್ಬ ಹಸನ್ ಯಾನೆ ಅಚ್ಚು ಅಚುನ್ ಬಂಧಿತ ಆರೋಪಿಗಳು.


ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯ ನಿವಾಸಿ ದರ್ಬೆಯಲ್ಲಿರುವ ನಸೀಬ್ ಬೋರ್‌ವೆಲ್ ಮಾಲಕ ಅಬೂಬಕ್ಕರ್ ಮುಲಾರ್ ಅವರಿಗೆ ಕಳೆದ ಒಂದು ವಾರಗಳಿಂದ ಅಪರಿಚಿತ ವ್ಯಕ್ತಿಯು ವಿವಿದ ಮೊಬೈಲ್ ಗಳಿಂದ ಕರೆ ಮಾಡಿ ಯಾರೋ ಒಬ್ಬ ವ್ಯಕ್ತಿ ಜೈಲಿನಲ್ಲಿದ್ದಾನೆ, ಅವನನ್ನು ಬಿಡಿಸಲು ಹಣ ಬೇಕು, ಅವನನ್ನು ಬಿಡಿಸಲು ರೂ. 13,00,000/- ತಗಲುತ್ತದೆ. ನೀನು ಹಣ ಕೊಡಬೇಕು. ನೀನು 2 ದಿನದ ಒಳಗೆ ರೂ. 3,50,000/- ಹಣ ರೆಡಿ ಮಾಡಬೇಕು, ಇಲ್ಲದಿದ್ದರೆ ನಿನ್ನನ್ನು ಮತ್ತು ನಿನ್ನ ಮಕ್ಕಳನ್ನು ಜೀವ ಸಹಿತ ಬಿಡುವುದಿಲ್ಲ. ನಿನ್ನ ಮಕ್ಕಳ ಜೀವನ ಹಾಳು ಮಾಡುತ್ತೇನೆ. ಈ ವಿಚಾರವನ್ನು ಇತರರಲ್ಲಿ ತಿಳಿಸಿದರೆ ನಿನ್ನ ಹೆಣ ಖಂಡಿತ ಬೀಳುತ್ತದೆ, ನೀನು ಜೀವಂತ ಬದುಕಲು ಸಾಧ್ಯವಿಲ್ಲ’ ಎಂದು ಜೀವ ಬೆದರಿಕ ಒಡ್ಡಿರುವುದಾಗಿ ಉದ್ಯಮಿ ಅಬೂಬಕ್ಕರ್ ಮುಲಾರ್ ಅವರು ಜ.೫ ರಂದು ಪುತ್ತೂರು ಸಂಪ್ಯ ಪೊಲೀಸರಿಗೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು  ಜ.14ರಂದು ಉದ್ಯಮಿಯಿಂದ ಹಣ ಪಡೆದುಕೊಂಡು ಹೋಗುವ ಸಮಯ ಕಾರ್ಯಾಚರಣೆ ನಡೆಸಿ, ಆರೋಪಿಗಳನ್ನು ಬಂಧಿಸಿ, ಉದ್ಯಮಿಯಿಂದ ವಸೂಲಿ ಮಾಡಿದ ರೂ. 50,000/- ಹಣ ಹಾಗೂ ಕೃತ್ಯಕ್ಕೆ ಬಳಸಿದ ಕಾರು ಮತ್ತು ಮೊಬೈಲ್ ಗಳನ್ನು ವಶಪಡಿಸಿಕೊಂಡದ್ದಾರೆ.


ಕಾರ್ಯಾಚರಣೆ ಹೀಗಿತ್ತು

ಉದ್ಯಮಿಯಿಂದ ದೂರು ಸ್ವೀಕರಿಸಿದ ಪೊಲೀಸರು ತನಿಖೆ ನಡೆಸಿ ಹಣದ ಬೇಡಿಕೆಯಿಟ್ಟ ಅಪರಿಚಿತರಿಗೆ ಉದ್ಯಮಿಯ ಮೂಲಕವೇ ಹಣದ ನೀಡುವ ಕುರಿತು ಮಾತುಕತೆ ನಡೆಸಿ ಕುರಿಯ ಸಮೀಪವೇ ಹಣ ನೀಡುವ ಸ್ಥಳ ನಿಗದಿ ಪಡಿಸಿದ್ದರು. ಹಾಗೆ ಜ.೧೪ರಂದು ಅಪರಿಚಿತರು ಕಾರಿನಲ್ಲಿ ಬಂದು ಕುರಿಯ ಸಮೀಪ ಉದ್ಯಮಿಯಿಂದ ಹಣ ಪಡೆದು ಹೋಗುತ್ತಿದ್ದಂತೆ ಸಂಪ್ಯ ಎಸ್.ಐ ಉದಯ ರವಿ ಅವರ ನೇತೃತ್ವದ ತಂಡ ಆರೋಪಿಗಳನ್ನು ಸುತ್ತುವರಿದು ಬಂಧಿಸಿದ್ದಾರೆ.


ಬಂಧಿತ ಆರೋಪಿಗಳ ಪೈಕಿ ಕಲಂದರ್ ಶರೀಫ್ ಶಾಫಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದು, ಹಸನಬ್ಬ ಹಸನ್ ಅಚ್ಚು ಅಚುನ್ ಈತನು ಮಂಗಳೂರು ನಗರದ ಕೋಣಾಜೆ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದಾನೆ. ಅಲ್ಲದೆ ಕಂಕನಾಡಿ ಮತ್ತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ದಾಖಲಾಗಿದೆ.


ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕ ಋಷಿಕೇಷ್ ಸೋನಾವಾಣೆ ಮತ್ತು ಪುತ್ತೂರು ಉಪ ವಿಭಾಗ ಪೊಲೀಸ್ ಉಪಾಧೀಕ್ಷಕಿ ಡಾ| ಗಾನ ಪಿ. ಕುಮಾರ್‌ ಅವರ ಮಾರ್ಗದರ್ಶನದಲ್ಲಿ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ಉಮೇಶ್ ಉಪ್ಪಳಿಗೆ aವರ ನೇತೃತ್ವದಲ್ಲಿ, ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ  ಉದಯರವಿ, ಅಮೀನ್ ಸಾಬ್ ಹಾಗೂ  ಸಿಬಂದಿ ಕೃಷ್ಣಪ್ಪ, ದೇವರಾಜ್, ಆದ್ರಾಮ, ಪ್ರವೀಣ್ ರೈ, ಹರ್ಷಿತ್, ಗಾಯತ್ರಿ, ವಿನೋದ್ ಭಾಗವಹಿಸಿರುತ್ತಾರೆ. ಜಿಲ್ಲಾ ಗಣಕ ಯಂತ್ರ ವಿಭಾಗದ ಸಂಪತ್, ದಿವಾಕರ್ ಸಹಕರಿಸಿದ್ದಾರೆ.

ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم