ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ; ಏ.16ರಿಂದ ಮೇ 4ರ ತನಕ ಪರೀಕ್ಷೆ

ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ; ಏ.16ರಿಂದ ಮೇ 4ರ ತನಕ ಪರೀಕ್ಷೆ

 


ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಏಪ್ರಿಲ್-ಮೇ ತಿಂಗಳಲ್ಲಿ ನಡೆಸಲು ತಯಾರಿ ನಡೆದಿದ್ದು, ತಾತ್ಕಾಲಿಕ ವೇಳಾಪಟ್ಟಿಯನ್ನು ಪಿಯು ಬೋರ್ಡ್ ಬಿಡುಗಡೆ ಮಾಡಿದ್ದು, ಏಪ್ರಿಲ್ 16 ರಿಂದ ಮೇ 4ರ ತನಕ ಪರೀಕ್ಷೆ ನಡೆಯಲಿದೆ.

ಪೋಷಕರು ಅಥವಾ ವಿದ್ಯಾರ್ಥಿಗಳಿಗೆ ಆಕ್ಷೇಪಣೆಗಳಿದ್ದಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಆಕ್ಷೇಪಣೆಯನ್ನು ಸಲ್ಲಿಸಲು ಇಂದಿನಿಂದ ಫೆಬ್ರವರಿ 1ರವರೆಗೆ ಅಂದರೆ ಸುಮಾರು 15 ದಿನಗಳ ಅವಕಾಶ ಕಲ್ಪಿಸಿಕೊಡಲಾಗಿದೆ.

2021-22ನೇ ಸಾಲಿನ ಪ್ರಥಮ ಪಿಯುಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪಠ್ಯಕ್ರಮದಲ್ಲಿ ಹಾಗೂ ಪ್ರಶ್ನೆಪತ್ರಿಕೆಯಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಲಾಗಿದೆ.

ವಾರ್ಷಿಕ ಪರೀಕ್ಷೆಗೂ ಮುನ್ನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪರೀಕ್ಷೆಯನ್ನು ಫೆಬ್ರವರಿ 17ರಿಂದ ಮಾರ್ಚ್ 25ರ ತನಕ ನಡೆಸಲು ದಿನಾಂಕವನ್ನು ನಿಗದಿಪಡಿಸಲಾಗಿದೆ.

ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಗಳನ್ನು ಮಾರ್ಚ್ 14 ರಿಂದ 25ರವರೆಗೆ ಜಿಲ್ಲಾ ಉಪನಿರ್ದೇಶಕರ ನೇತೃತ್ವದಲ್ಲಿ ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸಿ, ಪರೀಕ್ಷೆಗಳನ್ನು ನಡೆಸಲು ದಿನಾಂಕವನ್ನು ನಿಗದಿಪಡಿಸಲಾಗಿದೆ.

16-4-2022- ಗಣಿತಶಾಸ್ತ್ರ, ಶಿಕ್ಷಣ ಶಾಸ್ತ್ರ, ಮೂಲ ಗಣಿತ

18-4-2022- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ

ಸಂಖ್ಯಾಶಾಸ್ತ್ರ19-4-2022 ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್

20-4-2022 - ಇತಿಹಾಸ, ಭೌತಶಾಸ್ತ್ರ

21-4-2022- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಅರೇಬಿಕ್, ಫ್ರೆಂಚ್

22-4-2022- ತರ್ಕ ಶಾಸ್ತ್ರ, ವ್ಯವಹಾರ ಅಧ್ಯಯನ

23- 4-2022- ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ

25-4-2022- ಅರ್ಥ ಶಾಸ್ತ್ರ

26-4-2022- ಹಿಂದಿ

28-4-2022- ಐಚ್ಛಿಕ ಕನ್ನಡ, ಲೆಕ್ಕ ಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ

29-4-2022- ಕನ್ನಡ

30-4-2022- ಸಮಾಜ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ

2-5-2022- ಭೂಗೋಳ ಶಾಸ್ತ್ರ, ಜೀವಶಾಸ್ತ್ರ

4-5-2022- ಇಂಗ್ಲಿಷ್


0 تعليقات

إرسال تعليق

Post a Comment (0)

أحدث أقدم