ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಗೃಹರಕ್ಷಕ ದಳ ಕಚೇರಿಯಲ್ಲಿ ಗಣರಾಜ್ಯೋತ್ಸವ ಸಂಭ್ರಮ

ಗೃಹರಕ್ಷಕ ದಳ ಕಚೇರಿಯಲ್ಲಿ ಗಣರಾಜ್ಯೋತ್ಸವ ಸಂಭ್ರಮ


ಮಂಗಳೂರು: ದ.ಕ ಜಿಲ್ಲಾ ಗೃಹರಕ್ಷಕ ದಳದ ಮೇರಿಹಿಲ್‍ ಕಛೇರಿಯಲ್ಲಿ ಬೆಳಗ್ಗೆ 7.15ಕ್ಕೆ ಧ್ವಜಾರೋಹಣ ನಡೆಸಲಾಯಿತು. ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರುರವರು ಧ್ವಜಾರೋಹಣ ಮಾಡಿ ಮಾತನಾಡಿ, ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವವಾದಿ ರಾಷ್ಟ್ರ ಭಾರತ ಆಗಿದ್ದು, ನಮ್ಮ ಸಂವಿಧಾನ ಅತ್ಯಂತ ಸುದೀರ್ಘ ಸಂವಿಧಾನ ಆಗಿದ್ದು 395 ವಿಧಿಗಳನ್ನು ಹಾಗೂ 8 ಶೆಡ್ಯೂಲ್‍ಗಳನ್ನು ಹೊಂದಿದೆ. ಈಗ 12 ಪರಿಚ್ಛೇದವನ್ನು ಹೊಂದಿದೆ. ನಾವೆಲ್ಲರೂ ನಮ್ಮನ್ನು ಮಗದೊಮ್ಮೆ ದೇಶಕ್ಕಾಗಿ ಸಮರ್ಪಿಸಿಕೊಳ್ಳಬೇಕಾದ ಅಗತ್ಯವಿದೆ ಎಂದು ನುಡಿದರು.


ಈ ದೇಶದ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯುವ ಸಾಮಾಜಿಕ ಹೊಣೆಗಾರಿಕೆ ಪ್ರತಿಯೊಬ್ಬ ಪ್ರಜೆಗೂ ಇರಬೇಕು ಎಂದು ಕರೆ ನೀಡಿದರು. ಎಲ್ಲಾ ಗೃಹರಕ್ಷಕರಿಗೂ ಗಣರಾಜ್ಯೋತ್ಸವÀ ಶುಭಾಶಯ ಹಾರೈಸಿದರು. 


ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಗುರುರಾಜ್, ಸರ್ವಿಸ್ ಹೆಡ್ ಪಿಎಸ್‍ಎನ್ ಅಟೋಮೊಬೈಲ್ ಇವರು ಗೃಹರಕ್ಷಕರಿಗೆ ಗಣರಾಜ್ಯೋತ್ಸವದ ಶುಭಾಶಯವನ್ನು ಹಾರೈಸಿದರು. ಮಂಗಳೂರು ಘಟಕದ ಘಟಕಾಧಿಕಾರಿಯಾದ ಮಾರ್ಕ್‍ಶೇರ್ ಇವರು ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಕಚೇರಿಯ ಪ್ರಥಮ ದರ್ಜೆ ಸಹಾಯಕರಾದ ಅನಿತಾ ಟಿ.ಎಸ್. ಹಾಗೂ ಮಂಗಳೂರು ಘಟಕದ 150 ಮಂದಿ ಗೃಹರಕ್ಷಕ/ಗೃಹರಕ್ಷಕಿಯರು ಧ್ವಜಾರೋಹಣ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم