ಬೆಂಗಳೂರು: ರಸ್ತೆ ಗುಂಡಿಗೆ ಬಿದ್ದು ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶರ್ಮಿಳಾ (38) ಮೃತಪಟ್ಟ ಮಹಿಳೆ. ಮಾಗಡಿ ಮುಖ್ಯರಸ್ತೆಯಲ್ಲಿ ರಸ್ತೆ ಗುಂಡಿ ತಪ್ಪಿಸಲು ಹೋದ ಮಹಿಳೆ ಆಯತಪ್ಪಿ ರೋಡ್ಗೆ ಬಿದ್ದಿದ್ದಾರೆ.
ಈ ವೇಳೆ ಹಿಂದಿನಿಂದ ಬಂದ ಬೊಲೆರೋ ವಾಹನ ಮಹಿಳೆಯ ಮೇಲೆ ಹರಿದಿದ್ದು ಮಹಿಳೆ ಸ್ಥಳದಲ್ಲೇ ಸಾವಿಗೀಡಾದರು.
ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೊಲೆರೋ ಚಾಲಕ ಮಾದೇಶ್ ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
Post a Comment