ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ರಸ್ತೆ ಗುಂಡಿ ತಪ್ಪಿಸಲು ಹೋಗಿ ರಸ್ತೆಗೆ ಬಿದ್ದ ಮಹಿಳೆ, ಬೊಲೆರೋ ವಾಹನ ಹರಿದು ಸಾವು

ರಸ್ತೆ ಗುಂಡಿ ತಪ್ಪಿಸಲು ಹೋಗಿ ರಸ್ತೆಗೆ ಬಿದ್ದ ಮಹಿಳೆ, ಬೊಲೆರೋ ವಾಹನ ಹರಿದು ಸಾವು

 


ಬೆಂಗಳೂರು:  ರಸ್ತೆ ಗುಂಡಿಗೆ ಬಿದ್ದು ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶರ್ಮಿಳಾ (38) ಮೃತಪಟ್ಟ ಮಹಿಳೆ. ಮಾಗಡಿ ಮುಖ್ಯರಸ್ತೆಯಲ್ಲಿ ರಸ್ತೆ ಗುಂಡಿ ತಪ್ಪಿಸಲು ಹೋದ ಮಹಿಳೆ ಆಯತಪ್ಪಿ ರೋಡ್​ಗೆ ಬಿದ್ದಿದ್ದಾರೆ.

ಈ ವೇಳೆ ಹಿಂದಿನಿಂದ ಬಂದ ಬೊಲೆರೋ ವಾಹನ ಮಹಿಳೆಯ ಮೇಲೆ ಹರಿದಿದ್ದು ಮಹಿಳೆ ಸ್ಥಳದಲ್ಲೇ ಸಾವಿಗೀಡಾದರು.

ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೊಲೆರೋ ಚಾಲಕ ಮಾದೇಶ್​ ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

0 تعليقات

إرسال تعليق

Post a Comment (0)

أحدث أقدم