ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ರಸ್ತೆ ಅಪಘಾತ; ಇಬ್ಬರು ಯುವಕರು ಸಾವು

ರಸ್ತೆ ಅಪಘಾತ; ಇಬ್ಬರು ಯುವಕರು ಸಾವು

 



ಮಂಡ್ಯ: ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆಯೊಂದು ಮದ್ದೂರು ತಾಲೂಕಿನ ಬೆಸಗರಹಳ್ಳಿ ಬಳಿ ಶುಕ್ರವಾರ ರಾತ್ರಿ ನಡೆದಿದೆ.

ಮೃತರನ್ನು ಬೆಸಗರಹಳ್ಳಿ ಸಮೀಪದ ಪಣ್ಣೆದೊಡ್ಡಿ ಗ್ರಾಮದ ವಿನಯ್ (27) ಹಾಗೂ ಹರಳಹಳ್ಳಿ ಗ್ರಾಮದ ಪ್ರಸನ್ನ (29) ಎಂದು ಗುರುತಿಸಲಾಗಿದೆ.

ಯುವಕರು ಬೆಸಗರಹಳ್ಳಿ ಗ್ರಾಮದ ಮೆಡಿಕಲ್ ಸ್ಟೋರ್ ಒಂದರಲ್ಲಿ ಕೆಲಸ ಮಾಡುತ್ತಿದ್ದು, ತಡರಾತ್ರಿ ಕೆಲಸ ಮುಗಿಸಿಕೊಂಡು ಬೈಕ್ ನಲ್ಲಿ ತಮ್ಮ ಗ್ರಾಮಕ್ಕೆ ತೆರಳುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಅಪಘಾತ ಸಂಭವಿಸಿದೆ.

ಬೆಸಗರಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅಪರಿಚಿತ ವಾಹನದ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post