ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಗಾಯಕಿ ಲತಾ ಮಂಗೇಶ್ಕರ್ ಆರೋಗ್ಯ ಸ್ಥಿತಿ ಸ್ಥಿರ

ಗಾಯಕಿ ಲತಾ ಮಂಗೇಶ್ಕರ್ ಆರೋಗ್ಯ ಸ್ಥಿತಿ ಸ್ಥಿರ

 


ಮುಂಬೈ: ಕೋವಿಡ್ ಸೋಂಕಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದ ಖ್ಯಾತ ಹಿನ್ನೆಲೆ ಗಾಯಕಿ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ಮೂಲಗಳು ಮಾಹಿತಿ ನೀಡಿವೆ.

ನಿರಂತರವಾಗಿ ಲತಾ ಮಂಗೇಶ್ಕರ್ ಅವರ ಆರೋಗ್ಯವನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ. 

ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಡಾ. ಪ್ರತೀತ್ ಸಮ್ದಾನಿ ಅವರ ನೇತೃತ್ವದ ತಂಡ ಲತಾ ಮಂಗೇಶ್ಕರ್ ಅವರಿಗೆ ಚಿಕಿತ್ಸೆ ನೀಡುತ್ತಿದೆ.

ಅವರಿಗೆ ವಯಸ್ಸಾದ ಕಾರಣ ಚೇತರಿಸಿಕೊಳ್ಳಲು ಹೆಚ್ಚಿನ ಸಮಯ ಬೇಕಾಗಬಹುದು ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.


0 تعليقات

إرسال تعليق

Post a Comment (0)

أحدث أقدم