ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಜಲಪಾತದಲ್ಲಿ ಕಾಲು ಜಾರಿ ಬಿದ್ದು ವಿದ್ಯಾರ್ಥಿ ಸಾವು

ಜಲಪಾತದಲ್ಲಿ ಕಾಲು ಜಾರಿ ಬಿದ್ದು ವಿದ್ಯಾರ್ಥಿ ಸಾವು

 


ಶಿರಸಿ: ಜಲಪಾತದಲ್ಲಿ ಕಾಲು ಜಾರಿ ಬಿದ್ದು ವಿಕಾಸಾಶ್ರಮದ ವಿದ್ಯಾರ್ಥಿ ನೀರುಪಾಲಾಗಿರುವ ಘಟನೆಯೊಂದು ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಶಿವಗಂಗಾ ಫಾಲ್ಸ್‌ನಲ್ಲಿ ನಡೆದಿದೆ.

ಸುಬ್ರಮಣ್ಯ ವಿನಾಯಕ ಹೆಗಡೆ (18) ಮೃತ ವಿದ್ಯಾರ್ಥಿ. ಶಿರಸಿ ತಾಲೂಕಿನ ಜಡ್ಡಿಗದ್ದೆ ಸಮೀಪದ ಶಿವಗಂಗಾ ಫಾಲ್ಸ್​​ಗೆ ಇಂದು ಮೂರು ಜನ ವಿದ್ಯಾರ್ಥಿಗಳು ತೆರಳಿದ್ದರು.

ಈ ವೇಳೆ ಅವಘಡ ಸಂಭವಿಸಿದ್ದು, ವಿದ್ಯಾರ್ಥಿಗಾಗಿ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಯಿಂದ ಹುಡುಕಾಟ ನಡೆಸಿದ್ದಾರೆ.

ಘಟನೆ ಕುರಿತಂತೆ ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಿನ್ನೆ ರಾತ್ರಿಯಾದ ಕಾರಣ ಶೋಧ ಕಾರ್ಯ ಸ್ಥಗಿತಗೊಳಿಸಿರುವ ಪೊಲೀಸರು ಇಂದು ಕೂಡ ಶೋಧ ಕಾರ್ಯ ಮುಂದುವರಿಸುವುದಾಗಿ ತಿಳಿಸಿದ್ದಾರೆ.

0 Comments

Post a Comment

Post a Comment (0)

Previous Post Next Post