ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪಾರ್ತಿಸುಬ್ಬ ಪ್ರಶಸ್ತಿ ಪುರಸ್ಕೃತ ಶ್ರೀಧರ ಡಿ.ಎಸ್. ಅವರಿಗೆ ಸಮ್ಮಾನ‌

ಪಾರ್ತಿಸುಬ್ಬ ಪ್ರಶಸ್ತಿ ಪುರಸ್ಕೃತ ಶ್ರೀಧರ ಡಿ.ಎಸ್. ಅವರಿಗೆ ಸಮ್ಮಾನ‌



ಸುರತ್ಕಲ್: ತಡಂಬೈಲು ಶ್ರೀದುರ್ಗಾಂಬಾ ಮಹಿಳಾ ಯಕ್ಷಗಾನ ಮಂಡಳಿಯ ಏಳನೇ ವರ್ಷದ ತಾಳಮದ್ದಳೆ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪಾರ್ತಿಸುಬ್ಬ ಪ್ರಶಸ್ತಿ ಪುರಸ್ಕೃತ, ಹಿರಿಯ ಯಕ್ಷಗಾನ ವಿದ್ವಾಂಸ, ಪ್ರಸಂಗಕರ್ತ, ಸಾಹಿತಿ‌ ಶ್ರೀಧರ ಡಿ.ಎಸ್. ಅವರನ್ನು ಅಭಿನಂದಿಸಿ ಸಮ್ಮಾನಿಸಲಾಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಾನಪದ ಸಂಶೋಧಕ ಕೆ.ಎಲ್. ಕುಂಡಂತಾಯ ವಹಿಸಿದ್ದರು. ನಿವೃತ್ತ ಉಪನ್ಯಾಸಕ ನಾರಾಯಣ ಹೆಗಡೆ ಉಡುಪಿ ಅವರು ಅಭಿನಂದನೆಯ ಮಾತುಗಳನ್ನಾಡಿದರು. ಯಕ್ಷಗಾನ ಸಂಘಟಕ, ಜ್ಯೋತಿಷಿ ಶ್ರೀ ಮಧುಕರ ಭಾಗವತರು ಕುಳಾಯಿ, ಕಣಿಪುರ ಪತ್ರಿಕೆಯ ಸಂಪಾದಕ ನಾರಾಯಣ ಚೆಂಬಲ್ತಿಮಾರ್ ಮುಂತಾದವರು ಉಪಸ್ಥಿತರಿದ್ದರು.


ದುರ್ಗಾಂಬಾ ಮಹಿಳಾ ಯಕ್ಷಗಾನ ಮಂಡಳಿಯ ಗುರುಗಳಾದ ಸುರತ್ಕಲ್ ವಾಸುದೇವ ರಾವ್, ದುರ್ಗಾಂಬಾ ಮಹಿಳಾ ಯಕ್ಷಗಾನ ಮಂಡಳಿಯ ಅಧ್ಯಕ್ಷರಾದ ಸುಲೋಚನಾ ವಿ.ರಾವ್ ಉಪಸ್ಥಿತರಿದ್ದರು. ದುರ್ಗಾಂಬಾ ಮಹಿಳಾ ಯಕ್ಷಗಾನ ಮಂಡಳಿಯ ಸರ್ವ ಸದಸ್ಯರು ಭಾಗವಹಿಸಿದ್ದರು.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم