ಸುರತ್ಕಲ್: ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇದರ ವತಿಯಿಂದ ಕೃತಿ ಬಿಡುಗಡೆ ಸಮಾರಂಭ ಸುರತ್ಕಲ್ ಗೋವಿಂದ ದಾಸ ಕಾಲೇಜಿನ ಆಡಿಟೋರಿಯಂನಲ್ಲಿ ಶನಿವಾರ ಜರುಗಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಭರತ್ ಶೆಟ್ಟಿಯವರು ಯಕ್ಷಗಾನ ಕಲೆಗೆ ಪೋತ್ಸಾಹ ನೀಡಲು ಯಕ್ಷಗಾನ ಅಕಾಡೆಮಿ ಸ್ಥಾಪನೆಯಾಗಿದೆ.
ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಕಲಿಕೆಯ ಜೊತೆಜೊತೆಗೆ ಯಕ್ಷಗಾನದ ಬಗ್ಗೆಯೂ ಆಸಕ್ತಿ ತಳೆದು ಹವ್ಯಾಸವಾಗಿ ಬೆಳೆಸಿಕೊಳ್ಳಲು ಮುಂದಾಗಬೇಕು.
ಹೀಗಾದಾಗ ಭವಿಷ್ಯದಲ್ಲಿ ಯಕ್ಷಗಾನವನ್ನು ನಮ್ಮ ಮುಂದಿನ ಪೀಳಿಗೆಗೆ ಆಸಕ್ತಿದಾಯಕ ಸಾಂಸ್ಕೃತಿಕ ಕಲಾ ಚಟುವಟಿಕೆಯನ್ನು ಅವರಲ್ಲಿಯೂ ಬೆಳೆಸಲು ಸಾಧ್ಯವಾಗುತ್ತದೆ ಎಂದರು.
ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ ಜಿಎಲ್ ಹೆಗಡೆ ಕುಮಟಾ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊಫೆಸರ್ ಪಿ ಎಸ್ ಯಡಪಡಿತ್ತಾಯ ಕೃತಿಯನ್ನು ಅನಾವರಣಗೊಳಿಸಿದರು.
ಗೋವಿಂದ ದಾಸ ಕಾಲೇಜು ಸುರತ್ಕಲ್ ಇದರ ಪ್ರಾಂಶುಪಾಲ ಪ್ರೊಫೆಸರ್ ಕೃಷ್ಣಮೂರ್ತಿ ಪಿ. ಪೊಳಲಿ, ನಿತ್ಯಾನಂದ ಕಾರಂತ, ಡಾ ಸುಧಾರಾಣಿ, ಕದ್ರಿ ನವನೀತ ಶೆಟ್ಟಿ, ರಿಜಿಸ್ಟ್ರಾರ್ ಎಚ್.ಎಸ್ ಶಿವರುದ್ರಪ್ಪ ಮತ್ತಿತರರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment