ನಿಡ್ಡೋಡಿ: ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಜ್ಞಾನರತ್ನ ಎಜುಕೇಷನ್ ಹಾಗೂ ಚಾರಿಟೇಬಲ್ ಟ್ರಸ್ಟ್ ನಿಡ್ಡೋಡಿ ವತಿಯಿಂದ ಶ್ರೀ ದುರ್ಗಾದೇವಿ ಸಮೂಹ ವಿದ್ಯಾಸಂಸ್ಥೆಯಲ್ಲಿ ರಾಷ್ಟ್ರೀಯ ಯುವದಿನಾಚರಣೆಯನ್ನು ಕೋವಿಡ್ ಮಾರ್ಗಸೂಚಿ ಯನ್ನು ಪಾಲಿಸುವ ಮುಖಾಂತರ ದೀಪ ಪ್ರಜ್ವಲಿಸಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಆಚರಿಸಲಾಯಿತು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಯುವ ದಿನದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಪ್ರಬಂಧ, ಭಾಷಣ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು ಹಾಗೂ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು.
ಸಮಾರಂಭದಲ್ಲಿ ಉಪನ್ಯಾಸ ನೀಡಲು ವಿದ್ಯಾಭಾರತೀ ಪ್ರಾಂತ ಸಂಘಟನಾ ಕಾರ್ಯದರ್ಶಿ ಉಮೇಶ್ ಆಗಮಿಸಿದ್ದರು. ಇವರು ತಮ್ಮ ಉಪನ್ಯಾಸ ಮೂಲಕ ಮಕ್ಕಳಿಗೆ ಸ್ವಾಮಿ ವಿವೇಕಾನಂದರ ಜೀವನ ಹಾಗೂ ವಿವೇಕಾನಂದರು ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷರ ದಾಸ್ಯವನ್ನು ಅಂತ್ಯಗೊಳಿಸಲು ಭಾರತೀಯರನ್ನು ಸಂಘಟಿಸಲು ಶ್ರಮಿಸಿ ಅನೇಕ ಸ್ವಾತಂತ್ರ್ಯ ಹೋರಾಟಗಾರರ ಸೃಷ್ಟಿಗೆ ಕಾರಣೀಭೂತರಾಗಿದ್ದಾರೆ ಹಾಗೂ ಭಾರತದ ಹಿರಿಮೆಯನ್ನು ಜಗದುದ್ಧಲಕ್ಕೆ ಪಸರಿಸಿದ ವೀರ ಸನ್ಯಾಸಿಯೆಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಭಾಸ್ಕರ ದೇವಸ್ಯ ವಹಿಸಿದ್ದರು. ಸಂಸ್ಥೆಯ ಆಡಳಿತಾಧಿಕಾರಿ ಕೆ. ರಾಘವೇಂದ್ರ ಭಟ್, ಪ್ರಾಂಶುಪಾಲರಾದ ಶ್ರೀಮತಿ ಅನುರಾಧ ಸಾಲ್ಯಾನ್ ಹಾಗೂ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಯಶ್ವಿತಾ ಉಪಸ್ಥಿತರಿದ್ದರು. ಶ್ರೀಮತಿ ಸಂಧ್ಯಾ ಕಾರ್ಯಕ್ರಮ ನಿರೂಪಿಸಿದರು.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
Post a Comment