ವಿಜಯಪುರ: ಶಾಲೆಗಳಲ್ಲಿ ಬಿಸಿಯೂಟದ ಜೊತೆಯಲ್ಲಿ ವಿದ್ಯಾರ್ಥಿಗಳಿಗೆ ನಿಂಬೆಕಾಯಿ ಉಪ್ಪಿನಕಾಯಿ ನೀಡಲು ಸರ್ಕಾರ ಚಿಂತನೆ ನಡೆಸಿದೆ. ಆಹಾರ ಖಾತೆ ಸಚಿವ ಉಮೇಶ್ ಕತ್ತಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಿಂಬೆ ಬೆಳೆಗಾರರಿಗೆ ಪ್ರೋತ್ಸಾಹ ನೀಡಲು ಶಾಲೆಗಳಲ್ಲಿ ಬಿಸಿಯೂಟದ ಜೊತೆಗೆ ವಿದ್ಯಾರ್ಥಿಗಳಿಗೆ ನಿಂಬೆ ಉಪ್ಪಿನಕಾಯಿ ನೀಡುವ ಕುರಿತಂತೆ ಶಿಕ್ಷಣ ಇಲಾಖೆಯೊಂದಿಗೆ ಚರ್ಚೆ ನಡೆಸುವುದಾಗಿ ಅವರು ಹೇಳಿದ್ದಾರೆ.
ಪಡಿತರ ಚೀಟಿದಾರರ ಸಂಖ್ಯೆಗೆ ಅನುಗುಣವಾಗಿ ಜೋಳ ಮತ್ತು ರಾಗಿ ಸಂಗ್ರಹವಾಗಿಲ್ಲ. ಅಕ್ಕಿಯನ್ನು ಮಾತ್ರ ವಿತರಿಸುತ್ತಿದ್ದು, ಮುಂದಿನ ದಿನಗಳಲ್ಲಿ ಎಂ.ಎಸ್.ಪಿ. ಹೆಚ್ಚಳಕ್ಕೆ ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.
Post a Comment