ಮುಂಬೈ: ಎಸ್. ಎಸ್ ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ ಸಿನಿಮಾಕ್ಕೆ ಕಾತುರದಿಂದ ಕಾಯುತ್ತಿದ್ದ ಸಿನಿಪ್ರಿಯರಿಗೆ ಇದೀಗ ಚಿತ್ರತಂಡ ಹೊಸ ವರ್ಷದ ದಿನವೇ ಕಹಿ ಸುದ್ದಿಯೊಂದನ್ನು ನೀಡಿದೆ.
ಜನವರಿ 7 ರಂದು ತೆರೆ ಕಾಣಬೇಕಿದ್ದ ಸಿನಿಮಾದ ಬಿಡುಗಡೆ ದಿನಾಂಕವನ್ನು ಮುಂದೂಡಿರುವುದಾಗಿ ತಿಳಿಸಿದೆ. ಈ ಬಗ್ಗೆ ಟ್ವಿಟರ್ ನಲ್ಲಿ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿರುವ ಚಿತ್ರತಂಡ, " ಕೋವಿಡ್ ದಿನೇ ದಿನೇ ಹೆಚ್ಚಾಗುತ್ತಿದ್ದು ಅನೇಕ ರಾಜ್ಯಗಳಲ್ಲಿ ಥಿಯೇಟರ್ ಗಳಿಗೆ ನಿರ್ಬಂಧ ಹೇರಲಾಗಿದೆ. ಈ ಹಿನ್ನೆಲೆ ನಾವು ಸಿನಿಮಾವನ್ನು ಮುಂದೂಡಬೇಕಾಯಿತು. ನಿಮ್ಮ ಹುರುಪನ್ನು ಹೀಗೆ ಸದಾ ಕಾಪಾಡಿಕೊಳ್ಳಿ" ಎಂದು ಬರೆದುಕೊಂಡಿದೆ.
ಅನಿರೀಕ್ಷಿತವಾಗಿ ಮತ್ತೆ ಕೊರೋನಾ ಹೆಚ್ಚಾಗುತ್ತಿರುವುದರಿಂದ ಸಿನಿಮಾ ಕ್ಷೇತ್ರದ ಮೇಲೆ ಇದು ಅಡ್ಡ ಪರಿಣಾಮ ಬೀರುತ್ತಿದೆ. ಕನ್ನಡ, ತಮಿಳು, ಮಲಯಾಳಂ, ತೆಲುಗು ಸೇರಿದಂತೆ ಹಲವು ಭಾಷೆಗಳ ಚಿತ್ರಗಳು ತಮ್ಮ ಬಿಡುಗಡೆ ವೇಳಾಪಟ್ಟಿಯನ್ನು ಸಂಪೂರ್ಣವಾಗಿ ಬದಲಿಸಬೇಕಾದ ಅನಿವಾರ್ಯತೆಗೆ ಬಿದ್ದಿದೆ.
إرسال تعليق