ಘಾನಾ: ಪಶ್ಚಿಮ ಘಾನಾದಲ್ಲಿ ಗಣಿಗಾರಿಕೆ ಸ್ಫೋಟಕಗಳನ್ನು ಸಾಗಿಸುತ್ತಿದ್ದ ಟ್ರಕ್, ಮೋಟಾರ್ ಸೈಕಲ್ ಗೆ ಡಿಕ್ಕಿ ಹೊಡೆದ ಪರಿಣಾಮ 17 ಜನರು ಮೃತಪಟ್ಟಿದ್ದಾರೆ.
ಪಶ್ಚಿಮ ಆಫ್ರಿಕಾ ದೇಶದ ರಾಜಧಾನಿ ಅಕ್ರಾದಿಂದ ಪಶ್ಚಿಮಕ್ಕೆ 300 ಕಿ.ಮೀ ದೂರದಲ್ಲಿರುವ ಗಣಿ ನಗರ ಬೊಗೊಸೊ ಬಳಿಯ ಅಪಿಯಾಟೆಯಲ್ಲಿ ಮಧ್ಯಾಹ್ನದ ಸುಮಾರಿಗೆ ಈ ಅಪಘಾತ ಸಂಭವಿಸಿದೆ.
ಖನಿಜ ಸಮೃದ್ಧ ಪ್ರದೇಶದ ಎರಡು ಚಿನ್ನದ ಗಣಿಗಳ ನಡುವೆ ಪ್ರಯಾಣಿಸುತ್ತಿದ್ದ ಟ್ರಕ್ ಮೋಟಾರ್ ಸೈಕಲ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಫೋಟ ಸಂಭವಿಸಿದ್ದು, 17 ಜನರು ಮೃತಪಟ್ಟಿದ್ದಾರೆ. ಹಲವು ಮಂದಿ ಗಾಯಗೊಂಡಿದ್ದಾರೆ.
ಸ್ಫೋಟ ಸಂಭವಿಸಿದ ಪ್ರೆಸ್ಟೀ ಹುನಿ-ವ್ಯಾಲಿ ಮುನ್ಸಿಪಲ್ ಸರ್ಕಾರದ ಮುಖ್ಯಸ್ಥ ಐಸಾಕ್ ಡಿಸಾಮಾನಿ ಸ್ಥಳೀಯ ಮಾಧ್ಯಮಗಳಿಗೆ ಅಧಿಕಾರಿಗಳು ಈ ವರೆಗೆ ಸುಮಾರು 17 ಮೃತ ದೇಹಗಳು ಪತ್ತೆ ಹಚ್ಚಿದ್ದಾರೆ.
إرسال تعليق