ಉಡುಪಿ: ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣ ಕುರಿತು ಅಧಿಕಾರಿಗಳ ಸಭೆ ಗುರುವಾರ ನಡೆಸಲಾಯಿತು. ಜಿಲ್ಲೆಯಲ್ಲಿ ಕೋವಿಡ್ 19 ಹರಡುವುದನ್ನು ತಪ್ಪಿಸಲು ಅರ್ಹ ಪ್ರತಿಯೊಬ್ಬರೂ 2 ಡೋಸ್ ಲಸಿಕೆ ಪಡೆಯುವುದು ಹಾಗೂ ಕೋವಿಡ್ ಸಮುಚಿತ ವರ್ತನೆಗಳ ಪಾಲನೆ ಮಾಡುವುದರಿಂದ ನಿಯಂತ್ರಣ ಸಾದ್ಯವಾಗಲಿದ್ದು, ಜಿಲ್ಲೆಯಾದ್ಯಂತ ಕೋವಿಡ್ ಸಮುಚಿತ ವರ್ತನೆಗಳು ಕಡ್ಡಾಯವಾಗಿ ಪಾಲನೆಯಾಗುವಂತೆ ಅಧಿಕಾರಿಗಳು ಪರಿಶೀಲಿಸಬೇಕು ಎಂದು ಸೂಚಿಸಲಾಯಿತು.
ಕೋವಿಡ್ ಸಮುಚಿತ ವರ್ತನೆಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಪಾಲನೆ, ಕೈಗಳ ಸ್ವಚ್ಛತೆ ಕುರಿತಂತೆ ಜಿಲ್ಲೆಯಾದ್ಯಂತ ಸಾರ್ವಜನಿಕರಿಗೆ ಅರಿವು ಮೂಡಿಸುವುದರ ಜೊತೆಗೆ ಇವುಗಳನ್ನು ಪಾಲನೆಯನ್ನು ಉಲ್ಲಂಘಿಸಿದಲ್ಲಿ ಸೂಕ್ತ ದಂಢ ವಿಧಿಸುವಂತೆ ಸೂಚಿಸಲಾಯಿತು, ಜಿಲ್ಲಾ ಟಾಸ್ಕ್ ಪೋರ್ಸ್, ತಾಲೂಕು ಟಾಸ್ಕ್ ಪೂರ್ಸ್, ಗ್ರಾಮೀಣ ಟಾಸ್ಕ್ ಪೋರ್ಸ್ ತಂಡಗಳು, ಪ್ರತಿದಿನ ತಮ್ಮ ವ್ಯಾಪ್ತಿಯಲ್ಲಿ ಈ ಬಗ್ಗೆ ಪರಿಶೀಲನೆ ನಡೆಸಬೇಕು, ಪ್ರತೀ ಸೋಮವಾರ ಎಲ್ಲಾ ಅಧಿಕಾರಿಗಳನ್ನು ಒಳಗೊಂಡ ತಂಡ ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಕೋವಿಡ್ ಸಮುಚಿತ ವರ್ತನೆ ಪಾಲನೆ ಕುರಿತು ಅಭಿಯಾನ ನಡೆಸಿ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಮತ್ತು ದಂಡ ವಿಧಿಸಬೇಕು ಎಂದು ಸೂಚನೆ ನೀಡಲಾಯಿತು.
ಕೋವಿಡ್ 19 ಕುರಿತು ಸಾರ್ವಜನಿಕರ ದೂರುಗಳ ನಿವಾರಣೆಗೆ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ 24X7 ಕಾರ್ಯರ್ನಿಹಿಸುವ ಸಹಾಯವಾಣಿ ಕೇಂದ್ರಗಳನ್ನು ತೆರೆಯುವಂತೆ, ಜಿಲ್ಲೆ ತಾಲೂಕು ಮತ್ತು ಗ್ರಾಮೀಣ ಟಾಸ್ಕ್ ಪೋರ್ಸ್ ತಂಡದ ಸದಸ್ಯರುಗಳು ವಾರದಲ್ಲಿ ನಿಯಮಿತವಾಗಿ ಸಭೆ ನಡೆಸಿ, ತಮ್ಮ ವ್ಯಾಪ್ತಿಯಲ್ಲಿ ಕೋವಿಡ್ ನಿಯಂತ್ರಣ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಿ ಅವುಗಳನ್ನು ಸೂಕ್ತ ರೀತಿಯಲ್ಲಿ ಅನುಷ್ಠಾನಗೊಳಿಸಿ, ಕೋವಿಡ್ ಹರಡುವುದನ್ನು ನಿಯಂತ್ರಿಸಲು ಈ ಎಲ್ಲಾ ಟಾಸ್ಕ್ ಪೋರ್ಸ್ ತಂಡಗಳು ಪರಸ್ಪರ ಸಮನ್ವಯದಿಂದ ಕಾರ್ಯ ನಿರ್ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕ್ರಮವಹಿಸಬೇಕೆಂದು ತಿಳಿಸಲಾಯಿತು.
ತಾಲೂಕು ಮಟ್ಟದಲ್ಲಿ ಸಹ ಕೋವಿಡ್ ಸಂಪರ್ಕಿತರ ಪತ್ತೆ ಹಚ್ಚುವಿಕೆ ತಂಡಗಳನ್ನು ರಚಿಸಿ, ನೋಢೆಲ್ ಅಧಿಕಾರಿಗಳನ್ನು ನಿಯೋಜಿಸುವಂತೆ, ಸೀಲ್ ಡೌನ್ ಮಾಡಿರುವ ಮನೆಗಳಲ್ಲಿನ ಜನ ಅನಗತ್ಯವಾಗಿ ಹೊರಗೆ ಬಾರದಂತೆ ಪ್ರತಿದಿನ ಮನೆಗಳನ್ನು ಸಂದರ್ಶಿಸಿ ಎಚ್ಚರವಹಿಸುವಂತೆ ಈ ಬಗ್ಗೆ ಕ್ವಾರಂಟೈನ್ ಆಪ್ ನಲ್ಲಿ ವಿವರಗಳನ್ನು ದಾಖಲಿಸುವಂತೆ ಹಾಗೂ ಪಾಸಿಟಿವ್ ಪ್ರಕರಣಗಳು ಕಂಡು ಬಂದ ವಸತಿ ಪ್ರದೇಶಗಳು ಮತ್ತು ವಸತಿ ಸಮುಚ್ಛಯಗಳಲ್ಲಿ ಕಂಟೈನ್‌ಮೆಂಟ್ ಝೋನ್ ರಚಿಸಿ, ಕೋವಿಡ್ ಹರಡುವುದನ್ನು ನಿಯಂತ್ರಿಸಲು ಕ್ರಮವಹಿಸುವಂತೆ ಸೂಚಿಸಲಾಯಿತು.
ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿನ ವೈದ್ಯಕೀಯ ಉಪಕರಣಗಳು, ಐಸಿಯುಗಳು, ವೆಂಟಿಲೇಟರ್, ಆಕ್ಸಿಜಿನ್ ಕಾನ್ಸನ್‌ಟ್ರೇಟರ್ ಗಳು ಲಭ್ಯವಿರುವ ಬಗ್ಗೆ ವರದಿಯನ್ನು ನೀಡುವಂತೆ ಮತ್ತು ಅವುಗಳು ಸುಸ್ಥಿತಿಯಲ್ಲಿರುವ ಬಗ್ಗೆ ಮತ್ತು ಅಗತ್ಯ ದುರಸ್ತಿಗಳಿದಲ್ಲಿ ಶೀಘ್ರದಲ್ಲಿ ದುರಸ್ತಿಪಡಿಸಿ ಉಪಯೋಗಿಸಲು ಸಾಧ್ಯವಾಗುವಂತೆ ಸಿದ್ದವಾಗಿಟ್ಟುಕೊಳ್ಳುವಂತೆ ಹಾಗೂ ಎಲ್ಲಾ ಅಂಬುಲೈನ್ಸ್ ಗಳು ಸೇವೆಗೆ ಲಭ್ಯವಾಗುವಂತೆ ಕ್ರಮವಹಿಸಲು ಸೂಚಿಸಲಾಯಿತು. ಜಿಲ್ಲೆಯಲ್ಲಿ ಕೋವಿಡ್ ಚಿಕಿತ್ಸೆಗೆ ಅಗತ್ಯವಿರು ಔಷಧಗಳಿಳು ಸಾಕಷ್ಟು ಪ್ರಮಣದಲ್ಲಿ ದಾಸ್ತಾನು ಇರುವಂತೆ ಮತ್ತು ಜಿಲ್ಲೆಗೆ ಆಕ್ಸಿಜಿನ್ ಸರಬರಾಜು ಪ್ರಮಾಣ ನಿರಂತರವಾಗಿರುವAತೆ ನೋಡಿಕೊಳ್ಳಬೇಕು ಎಂದು ಸೂಚಿಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಮತ್ತಿತರ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡುವ ಸಾರ್ವಜನಿಕರು ಕಡ್ಡಾಯವಾಗಿ 2 ಡೋಸ್ ಲಸಿಕೆ ಪಡೆದಿರುವ ಬಗ್ಗೆ ಮತ್ತು ಕೋವಿಡ್ ಸಮುಚಿತ ವರ್ತನೆಗಳನ್ನು ಪಾಲಿಸುವ ಬಗ್ಗೆ ಪರಿಶೀಲಿಸುವಂತೆ ಎಲ್ಲಾ ಅಧಿಕಾರಿಗಳಿಗೆ ಸೂಚಿಸಲಾಯಿತು. ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ನಿಯಮಗಳನ್ನು ಕಟ್ಟುನಿಟಾಗಿ ಪಾಲಿಸುವಂತೆ ಸೂಚನೆ ನೀಡಿ ನಿಗದಿತ ಸಂಖ್ಯೆಗಿಂತ ಹೆಚ್ಚಿನ ಜನ ಸೇರುವ ಸಭೆ, ಸಮಾರಂಭ ಮತ್ತಿತರ ಕಾರ್ಯಕ್ರಮಗಳ ಬಗ್ಗೆ ಪರಿಶೀನೆ ನಡೆಸಲು ಫ್ಲಯಿಂಗ್ ಸ್ಕಾಡ್ ತಂಡಗಳನ್ನು ನಿಯೋಜಿಸುವಂತೆ ಸೂಚನೆ ನೀಡಲಾಯಿತು. ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ರಚಿಸಲಾಗಿರುವ ವಿವಿಧ ಕಾರ್ಯಪಡೆಗಳ ತಂಡದ ಅಧಿಕಾರಿಗಳು ತಮಗೆ ವಹಿಸಲಾಗಿರುವ ಕಾರ್ಯಗಳನ್ನು ಯಾವುದೇ ಲೋಪಗಳಿಗೆ ಆಸ್ಪದ ನೀಡದಂತೆ, ಎಲ್ಲಾ ತಂಡಗಳೊಂದಿಗೆ ಪರಸ್ಪರ ಸಮನ್ವಯದಿಂದ ಒಂದೇ ತಂಡದ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಲಾಯಿತು.
ಜಿಲ್ಲೆಯ ಜನತೆ ಸಹ ಅಧಿಕಾರಿಗಳೊಂದಿಗೆ ಸಂಯಮದಿಂದ ವರ್ತಿಸಿ ಕೋವಿಡ್ ಸಮುಚಿತ ವರ್ತನೆಗಳನ್ನು ಪಾಲಿಸಿ, ಮಾಸ್ಕ್ ಧರಿಸಿ. ಸರ್ಕಾರದ ಮಾರ್ಗಸೂಚಿಗಳನ್ನು ಅನುಷ್ಟಾನಗೊಳಿಸಲು ಮತ್ತು ಕೋವಿಡ್ 19 ನಿಯಂತ್ರಿಸಲು ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಕೋರುತ್ತೇನೆ.
- ಕೂರ್ಮಾರಾವ್, ಜಿಲ್ಲಾಧಿಕಾರಿ
Post a Comment