ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ವಿದ್ಯಾಸಿರಿ ಯೋಜನೆ: ಜ.10ರ ವರೆಗೆ ಅವಧಿ ವಿಸ್ತರಣೆ

ವಿದ್ಯಾಸಿರಿ ಯೋಜನೆ: ಜ.10ರ ವರೆಗೆ ಅವಧಿ ವಿಸ್ತರಣೆ


ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಯಡಿ, ಅಲ್ಪಸಂಖ್ಯಾತರ ಸಮುದಾಯದ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸರ್ಕಾರಿ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ಸಿಗದೆ ಇರುವ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರೆಸಲು ಅನುಕೂಲವಾಗುವಂತೆ ವಿದ್ಯಾಸಿರಿ ಯೋಜನೆಯಡಿ ಊಟ ಮತ್ತು ವಸತಿ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ 10 ರ ವರೆಗೆ ವಿಸ್ತರಿಸಲಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ಸೈಟ್  https://dom.karnataka.gov.in/udupi/public ಅಥವಾ ಉಡುಪಿ ದೂರವಾಣಿ ಸಂಖ್ಯೆ: 0820-2574596, ಕುಂದಾಪುರ ದೂರವಾಣಿ ಸಂಖ್ಯೆ: 08254-230370 ಹಾಗೂ ಕಾರ್ಕಳ ದೂರವಾಣಿ ಸಂಖ್ಯೆ: 08258-231101 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ




0 تعليقات

إرسال تعليق

Post a Comment (0)

أحدث أقدم