ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಚಂದ್ರಶೇಖರ ಪಾಟೀಲ ಅವರ ನಿಧನಕ್ಕೆ ಗಣ್ಯರ ಸಂತಾಪ

ಚಂದ್ರಶೇಖರ ಪಾಟೀಲ ಅವರ ನಿಧನಕ್ಕೆ ಗಣ್ಯರ ಸಂತಾಪ



ಮಂಗಳೂರು: ಕನ್ನಡದ ಹಿರಿಯ ಸಾಹಿತಿ, ಭಾಷಾತಜ್ಞ, ಭಾಷಾ ಹೋರಾಟಕಾರ ಚಂದ್ರದೇಖರ ಪಾಟೀಲ (ಚಂಪಾ)ಅವರ  ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.


ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು, ಚುಟುಕು ಸಾಹಿತ್ಯ ಪರಿಷತ್ತಿನ ರಾಜ್ಯ ಪ್ರಧಾನ ಸಂಚಾಲಕ ಎಂ.ಜಿ.ಆರ್ ಅರಸ್, ದಕ್ಷಿಣ ಕನ್ನಡ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಡಾ.ಎಂ.ಪಿ.ಶ್ರೀನಾಥ್, ಉಡುಪಿ  ಚುಟುಕು ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಕಾ.ವೀ.ಕೃಷ್ಣದಾಸ್, ಗೌರವಾಧ್ಯಕ್ಷೆ ತಾರಾ ಆಚಾರ್ಯ, ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹರೀಶ್ ಸುಲಾಯ ಒಡ್ಡಂಬೆಟ್ಟು, ದಕ್ಷಿಣ ಕನ್ನಡ ಚುಸಾಪ ಜಿಲ್ಲಾ ಗೌರವಾಧ್ಯಕ್ಷ ಇರಾ ನೇಮು ಪೂಜಾರಿ, ಮಾಜಿ ಜಿಲ್ಲಾಧ್ಯಕ್ಷ ಕವಿ ಪತ್ರಕರ್ತ ಗಣೇಶ್ ಪ್ರಸಾದ್ ಪಾಂಡೇಲು, ಗೋವಿಂದದಾಸ ಕಾಲೇಜಿನ ಪ್ರಾಚಾರ್ಯ ಪ್ರೊಫೆಸರ್ ಪಿ. ಕೃಷ್ಣಮೂರ್ತಿ, ಕರ್ನಾಟಕ ಜಾನಪದ,ಯಕ್ಷಗಾನ ಮತ್ತು ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಪ್ರೊ.ಭಾಸ್ಕರ್ ರೈ ಕುಕ್ಕುವಳ್ಳಿ, ಅರೆಹೊಳೆ ಪ್ರತಿಷ್ಠಾನದ ಅಧ್ಯಕ್ಷ ಅರೆಹೊಳೆ ಸದಾಶಿವ ರಾವ್, ಕಲ್ಲಚ್ಚು ಪ್ರಕಾಶನದ ಮಹೇಶ್ ಆರ್ ನಾಯಕ್, ಅಮೃತ ಪ್ರಕಾಶ ಪತ್ರಿಕೆಯ ಸಂಪಾದಕಿ ಮಾಲತಿ ಶೆಟ್ಟಿ ಮಾಣೂರು, ಸಂಘಟಕ ಗುರುಪ್ರಸಾದ್ ಕಡಂಬಾರ್, ಟೈಮ್ಸ್ ಶಿಕ್ಷಣ ಸಂಸ್ಥೆ ಮುಖ್ಯಸ್ಥ ಗಣೇಶ್ ಹೆಬ್ಬಾರ್ ಮೊದಲಾದ ಗಣ್ಯರು ತಮ್ಮ ಸಂತಾಪವನ್ನು ಸೂಚಿಸಿದ್ದಾರೆ.

0 تعليقات

إرسال تعليق

Post a Comment (0)

أحدث أقدم