ಬೆಂಗಳೂರು: ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳ ಬಳಿ 1 ಕೆಜಿ ಗಾಂಜಾ ಪತ್ತೆ ಆಗಿದ್ದು, ಬೆಂಗಳೂರಿನ ಬ್ಯಾಡರಹಳ್ಳಿ ಠಾಣೆ ಪೊಲೀಸರಿಂದ ಇಬ್ಬರು ಸೆರೆಯಾಗಿದ್ದಾರೆ.
ಆರೋಪಿಗಳಾದ ಅಭಿಜಿತ್, ನಿತಿನ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಗಾಂಜಾ ಪೆಡ್ಲರ್ಗಾಗಿ ಪೊಲೀಸರ ಶೋಧ ಕಾರ್ಯ ನಡೆಸಲಾಗಿದೆ.
ಫೆಬ್ರವರಿ 11ರಂದು ರಾತ್ರಿ ಸಮಯದಲ್ಲಿ ಗಾಂಜಾ ನಶೆಯಲ್ಲಿ ಅಡ್ಡಾದಿಡ್ಡಿ ಬೈಕ್ ಚಾಲನೆ ಮಾಡಿದಾಗ ಅನುಮಾನಗೊಂಡು ಸ್ಥಳೀಯರು ಬೈಕ್ ತಡೆದು ವಿಚಾರಿಸಿದ್ದರು.
ಈ ವೇಳೆಯಲ್ಲಿ ವಿದ್ಯಾರ್ಥಿಗಳ ಬ್ಯಾಗ್ನಲ್ಲಿ 1 ಕೆಜಿ ಗಾಂಜಾ ಪತ್ತೆ ಆಗಿದೆ. ಆರೋಪಿಗಳನ್ನು ಸ್ಥಳೀಯರು ಬ್ಯಾಡರಹಳ್ಳಿ ಪೊಲೀಸರಿಗೆ ಒಪ್ಪಿಸಿದ್ದಾರೆ.
إرسال تعليق