ಶಿವಮೊಗ್ಗ: ಕರ್ತವ್ಯದಲ್ಲಿದ್ದ ಎಎಸ್ಐ ಹೃದಯಾಘಾತದಿಂದ ನಿಧನವಾಗಿರುವ ಘಟನೆಯೊಂದು ಶಿಕಾರಿಪುರ ತಾಲೂಕು ಶಿರಾಳಕೊಪ್ಪದಲ್ಲಿ ನಡೆದಿದೆ.
ಶಿರಾಳಕೊಪ್ಪ ಪೊಲೀಸ್ ಠಾಣೆಯ ಎಎಸ್ಐ ಶಿವರುದ್ರಪ್ಪ ಕಬಟೂರ್ (56) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಶಿವರುದ್ರಪ್ಪ ಕಳೆದ ಐದಾರು ವರ್ಷಗಳಿಂದ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ದಕ್ಷತೆಯಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ಕರ್ತವ್ಯದಲ್ಲಿ ಇದ್ದಾಗಲೇ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದಾರೆ.
ಶಿವರುದ್ರಪ್ಪನವರಿಗೆ ಪತ್ನಿ ಹಾಗೂ ಮೂವರು ಹೆಣ್ಣು ಮಕ್ಕಳಿದ್ದಾರೆ.
إرسال تعليق