ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 UAE ನಿಂದ ಗೋಲ್ಡನ್ ವೀಸಾ ಪಡೆದ ಬಹು ಭಾಷಾ ನಟಿ ಪ್ರಣಿತಾ ಸುಭಾಷ್

UAE ನಿಂದ ಗೋಲ್ಡನ್ ವೀಸಾ ಪಡೆದ ಬಹು ಭಾಷಾ ನಟಿ ಪ್ರಣಿತಾ ಸುಭಾಷ್

 


ಬೆಂಗಳೂರು : ದಕ್ಷಿಣ ಭಾರತದ ಕ್ಯೂಟ್ ನಟಿ ಪ್ರಣಿತಾ ಸುಭಾಷ್ UAEನಿಂದ ಗೋಲ್ಡನ್ ವೀಸಾ ಸ್ವೀಕರಿಸಿದ್ದಾರೆ.

ಬಹುಭಾಷಾ ನಟಿ ಯಾದ ಪ್ರಣಿತಾ ಟ್ಟಿಟ್ಟರ್ ನಲ್ಲಿ, ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನಿಂದ ಗೋಲ್ಡನ್ ವೀಸಾ ಸ್ವೀಕರಿಸುತ್ತಿರುವುದು ಸಂತಸದ ವಿಷಯವಾಗಿದೆ ಎಂದು ಬರೆದು ಪೋಸ್ಟ್ ಮಾಡಿದ್ದಾರೆ.

ಈ ಪೋಸ್ಟ್ ನೋಡಿದ ಅಭಿಮಾನಿಗಳು ಅಭಿನಂದನೆಗಳನ್ನು ತಿಳಿಸಿದ್ದಾರೆ.

ಯುಎಇ ಗೋಲ್ಡನ್ ವೀಸಾದಿಂದ ಅರಬ್ ನಲ್ಲಿ ಬೇರೆ ರಾಷ್ಟ್ರದ ಪ್ರಜೆಗಳು ಜೀವನ ನಡೆಸುವ, ಕೆಲಸ ಮಾಡುವ ಮತ್ತು ಓದುವ ಅವಕಾಶಗಳು ಇರುತ್ತದೆ.

ಆ ಗೌರವವನ್ನು ಕನ್ನಡದ ನಟಿ ಪ್ರಣಿತಾ ಪಡೆದಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಷಯವಾಗಿದೆ.

free website counter

0 تعليقات

إرسال تعليق

Post a Comment (0)

أحدث أقدم